ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‍ಐಆರ್

 

 

ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ವಿರುದ್ಧ ಪ್ರತಿಭಟಿಸಿ ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಿದ 15 ಜನ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

READ | ರೈಲ್ವೆ ಯೋಜನೆಗೆ ಅಡಿಕೆ ತೋಟ ಭೂಸ್ವಾಧೀನ, ಮನನೊಂದು ರೈತ ಆತ್ಮಹತ್ಯೆ

ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಅದನ್ನು ಮೀರಿ ಗುಂಪುಗೂಡಿ ಫೆಬ್ರವರಿ 17ರಂದು ಮಧ್ಯಾಹ್ನ ಪ್ರತಿಭಟನೆ ನಡೆಸಿದ್ದಾರೆ ಎಂಬ ಕಾರಣಕ್ಕೆ ಯುವ ಕಾಂಗ್ರೆಸ್ ಮುಖಂಡರಾದ ಕೆ.ರಂಗನಾಥ್, ಎಂ.ಪ್ರವೀಣ್ ಕುಮಾರ್, ಎಚ್.ಪಿ.ಗಿರೀಶ್, ಟಿ.ವಿ.ರಂಜೀತ್, ಎಸ್.ಕುಮಾರೇಶ್ ಸೇರಿದಂತೆ 15 ಜನ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಬಾವುಟ ಹಿಡಿದುಕೊಂಡು ಕುವೆಂಪು ರಸ್ತೆಯ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ನಿಷೇಧಾಜ್ಞೆಯನ್ನು ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

error: Content is protected !!