ನಾಳೆಯೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

 

 

ಸುದ್ದಿ ಕಣಜ.ಕಾಂ | CITY | SCHOOL, COLLEGE HOLIDAY
ಶಿವಮೊಗ್ಗ: ಭಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಬೆನ್ನಲ್ಲೇ ನಗರದಲ್ಲಿ ನಡೆದಿರುವ ಬೆಳವಣಿಗೆಗಳನ್ನು ಮನಗಂಡು ಫೆ.22ರಂದು ನಗರ ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.
ಭಾನುವಾರ ರಾತ್ರಿ ಕೊಲೆ ನಡೆದ ಬಳಿಕ ವಿವಿಧೆಡೆ ಕಲ್ಲು ತೂರಾಟ ನಡೆಯುತ್ತಿದ್ದಂತೆಯೇ ಸೋಮವಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ, ಪರಿಸ್ಥಿತಿ ಇನ್ನಷ್ಟು ಉದ್ವಿಗ್ನಗೊಂಡಿರುವುದರಿಂದ ಮುಂಜಾಗ್ರತೆಗಾಗಿ ರಜೆ ಘೋಷಿಸಲಾಗಿದೆ.

RELATED NEWS 

error: Content is protected !!