ಭಜರಂಗ ದಳ ಕಾರ್ಯಕರ್ತ ಹರ್ಷನ ಮನೆಗೆ ಸ್ವಾಮೀಜಿಗಳ ಭೇಟಿ, ಸಂತರ ನಡೆಗೆ ಸಾಂತ್ವನದ ಕಡೆಗೆ

 

 

ಸುದ್ದಿ ಕಣಜ.ಕಾಂ | DISTRICT | 
ಶಿವಮೊಗ್ಗ: ಭಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆ ಹಿನ್ನೆಲೆ ವಿವಿಧ ಮಠಗಳ ಮಠಾಧೀಶರು ಸೀಗೆಹಟ್ಟಿಯಲ್ಲಿರುವ ನಿವಾಸಕ್ಕೆ ಶನಿವಾರ ಭೇಟಿ ನೀಡಿದರು.
ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರ ನೇತೃತ್ವದಲ್ಲಿ ವಿವಿಧ ಮಠಾಧೀಶರು ಹರ್ಷನ ಕುಟುಂಬಕ್ಕೆ ಸಾಂತ್ವನ ನೀಡಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಡಾ. ಶಿವಮೂರ್ತಿ ಮುರುಘಾ ಶರಣರು, `ಸಂತರ ನಡೆ ಸಾಂತ್ವಾನ ಕಡೆಗೆ’ ಎಂಬಂತೆ ಹರ್ಷನ ಮನೆಗೆ ಭೇಟಿ ನೀಡಿದ್ದೇವೆ ಎಂದರು.

READ | ಶಿವರಾತ್ರಿಯಂದು ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನ ಪ್ರವೇಶ ನಿಷೇಧ

ಇಂತಹ ದುಷ್ಕೃತ್ಯ ನಡೆಯಬಾರದಿತ್ತು. ಈ ರೀತಿಯ ಹಿಂಸಾತ್ಮಕ ಸಂಘರ್ಷ ಯಾರಿಗೂ ಒಳ್ಳೆಯದಲ್ಲ. ಹರ್ಷ ಚಿಕ್ಕವಯಸ್ಸಿನಲ್ಲೇ ಅನೇಕ ಸಮಾಜ ಸೇವೆ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಇಂತಹವರನ್ನು ಕಳೆದುಕೊಂಡಿರುವುದು ಸಮಾಜಕ್ಕೆ ದೊಡ್ಡ ನಷ್ಟ ಎಂದು ಹೇಳಿದರು.
ದೇಶದಲ್ಲಿ ಎಲ್ಲರೂ ಪರಸ್ವರ ಭಾವೈಕ್ಯತೆಯಿಂದ ಜೀವನ ನಡೆಸಬೇಕು. ಸಮಾಜದಲ್ಲಿ ಎಲ್ಲರಲ್ಲೂ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯ ಭಾವನೆ ಮೂಡಬೇಕು. ಸಂಘ, ಸಂಸ್ಥೆಗಳು ಹಾಗೂ ಸರ್ಕಾರ ಈ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು.

READ | ಪಿಯುಸಿ, ಡಿಪ್ಲೊಮಾ, ಪದವಿ ಪಾಸ್ ಆದವರಿಗೆ ಶಿವಮೊಗ್ಗದಲ್ಲಿ ಉದ್ಯೋಗ, ಅರ್ಹತೆಗಳೇನು?

ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಭಗೀರಥ ಗುರುಪೀಠದ ಡಾ. ಪುರುಷೋತ್ತಮಾನಂದಪುರಿ ಸ್ವಾಮೀಜಿ, ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಡಾ.ಶಾಂತವೀರ ಸ್ವಾಮೀಜಿ, ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಮಡಿವಾಳ ಗುರುಪೀಠದ ಡಾ.ಬಸವ ಮಾಚಿದೇವ ಸ್ವಾಮೀಜಿ, ಅಂಬಿಗರ ಗುರುಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ, ಶಿವಮೊಗ್ಗ ಬಸವಕೇಂದ್ರದ ಡಾ. ಬಸವ ಮರುಳಸಿದ್ಧ ಸ್ವಾಮೀಜಿ, ಶಿಕಾರಿಪುರ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಕೊರಟಗೆರೆಯ ಶ್ರೀ ಮಹಾಲಿಂಗ ಸ್ವಾಮೀಜಿ ಭೇಟಿ ನೀಡಿ ಸಾಂತ್ವಾನ ಹೇಳಿದರು.
ಸೂಡಾ ಅಧ್ಯಕ್ಷ ನಾಗರಾಜ್, ಬಿಜೆಪಿ ಮುಖಂಡರಾದ ಕೆ.ಈ.ಕಾಂತೇಶ್, ಪ್ರಮುಖರಾದ ಚನ್ನಬಸಪ್ಪ, ಬಳ್ಳೇಕೆರೆ ಸಂತೋಷ್, ಜ್ಞಾನೇಶ್ವರ್ ಇತರರಿದ್ದರು.

https://www.suddikanaja.com/2022/02/26/pratap-singh-mp-who-visited-harshas-house-allegations-against-congress/

error: Content is protected !!