ಸಹ್ಯಾದ್ರಿ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿಗಳಲ್ಲಿ ಹೊಟ್ಟೆನೋವು, ವಾಂತಿ, ಆಸ್ಪತ್ರೆಗೆ ದಾಖಲು

 

 

ಸುದ್ದಿ ಕಣಜ.ಕಾಂ | CITY | HEALTH NEWS
ಶಿವಮೊಗ್ಗ: ವಿದ್ಯಾನಗರದಲ್ಲಿರುವ ಸಹ್ಯಾದ್ರಿ ಕಾಲೇಜು ಹಾಸ್ಟೆಲ್ ನ 27 ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೋಸ್ಕರ ದಾಖಲಿಸಲಾಗಿದೆ.

READ | ಆಂಧ್ರದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್

ಗುರುವಾರ ಮಧ್ಯಾಹ್ನ ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ ವಿದ್ಯಾರ್ಥಿಗಳಲ್ಲಿ ಸಂಜೆ ಹೊತ್ತಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ನಂತರ, ವಾಂತಿಯಾಗಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಎಲ್ಲರೂ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಸಿಂಡಿಕೇಟ್ ಸದಸ್ಯ ಸಂತೋಷ್ ಬಳ್ಳಕೆರೆ ಇತರರು ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ. ನಂತರ, ಆರೋಗ್ಯ ವಿಚಾರಿಸಿದ್ದಾರೆ.

error: Content is protected !!