ನಿರ್ಬಂಧ ಹೇರಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಅವಕಾಶ

 

 

ಸುದ್ದಿ ಕಣಜ.ಕಾಂ | DISTRICT | ROUTE CHANGE
ಶಿವಮೊಗ್ಗ: ನಿರ್ಬಂಧ ಹೇರಿದ್ದ ರಾಷ್ಟ್ರೀಯ ಹೆದ್ದಾರಿ 766(ಸಿ)ಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಆದೇಶಿಸಿದ್ದಾರೆ.

ಸಾರ್ವಜನಿಕರ ಹಿತಕ್ಕಾಗಿ ನಿರ್ಧಾರ
ಡಿಸೆಂಬರ್ 2021ರಲ್ಲಿ ಹೊರಡಿಸಿದ ಆದೇಶವನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಹಿಂಪಡೆದು ಮುಂಗಾರು ಮಳೆಯ ಪ್ರಾರಂಭದವರೆಗೆ ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮದ್ಯದಲ್ಲಿರುವ ಸೇತುವೆಯ ಎರಡು ಕಡೆಗೂ ಸುರಕ್ಷತಾ ಬ್ಯಾರಿಕೇಡ್‍ಗಳನ್ನು ಅಳವಡಿಸಿ ಭದ್ರಾತಾ ವ್ಯವಸ್ಥೆಯೊಂದಿಗೆ ಭಾರಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಮುಂದಿನ ಆದೇಶದವರೆಗೆ ವಿಸ್ತರಿಸಿರುವುದಾಗಿ ಆದೇಶದಲ್ಲಿ ಸೂಚಿಸಿದ್ದಾರೆ.

error: Content is protected !!