ಯುಗಾದಿ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ, ಸಿಎಂ ಟ್ವೀಟ್‍ನಲ್ಲೇನಿದೆ?

 

 

ಸುದ್ದಿ ಕಣಜ.ಕಾಂ | KARNATAKA | DA HIKE
ಬೆಂಗಳೂರು: ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಯುಗಾದಿಯ ಬೆನ್ನಲ್ಲೇ ಸಹಿ ಸುದ್ದಿಯನ್ನು ನೀಡಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಲವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 2022ರ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ (DA HIKE) ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.24.50ರಿಂದ ಶೇ.27.25 (ಶೇ.2.75) ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರ ಮಂಗಳವಾರ ಆದೇಶಿಸಿದೆ.

READ | ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ ಪಾಸ್‍ಗೆ ಕಾಲಾವಕಾಶ

ಸಿಎಂ ಟ್ವೀಟ್ ನಲ್ಲಿ ಹೇಳಿದ್ದೇನು?
ರಾಜ್ಯ ಸರಕಾರಿ ನೌಕರರಿಗೆ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ.2.75ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1,447 ಕೋಟಿ ರೂಪಾಯಿ ವಾರ್ಷಿಕ ವೆಚ್ಚ ಭರಿಸಲಿದೆ.’ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

CM Bommai Tweet

ಆದೇಶದಲ್ಲಿ ಏನಿದೆ?
1. ಯುಜಿಸಿ/ ಎಐಸಿಟಿಇ/ ಐಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೂ ಈ ಆದೇಶಗಳು ಅನ್ವಯಿಸುತ್ತವೆ.
2. ಸರ್ಕಾರದ ಮತ್ತು ಜಿಲ್ಲಾ ಪಂಚಾಯಿತಿಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣೀಗಳಲ್ಲಿರುವ ಪೂರ್ಣಾವಧಿ ವರ್ಕ್ ಜಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿವಿಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಆದೇಶ ಅನ್ವಯಿಸುತ್ತದೆ.
3. ಯುಜಿಸಿ, ಎಐಐಸಿಟಿಇ/ ಪಿಸಿಎಆರ್/ ಎನ್.ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತತಿರುವ ನೌಕರರಿಗೆ ಮತ್ತು ಎನ್.ಜೆಪಿಸಿ ಪಿಂಚಣಿದಾರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು.
4. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿ ಭತ್ಯೆಯನ್ನು ನಗದಾಗಿ ಪಾವತಿಸಲಾಗುವುದು.
5. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ 50 ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು. 50 ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.
6. ತುಟ್ಟಿಭತ್ಯೆ ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ.

GOVERNMENT ORDER

error: Content is protected !!