BREAKING NEWS | ಶಿವಮೊಗ್ಗದಲ್ಲಿ ರಾಜೀನಾಮೆ ಘೋಷಿಸಿದ ಕೆ.ಎಸ್.ಈಶ್ವರಪ್ಪ, ಭಾವುಕರಾದ ಕೆ.ಎಸ್.ಈ

 

 

ಸುದ್ದಿ ಕಣಜ.ಕಾಂ | KARNATAKA | POLITICAL NEWS
ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಗುರುವಾರ ಸಂಜೆ ಪಕ್ಷದ ಕಚೇರಿಯಲ್ಲಿ ರಾಜೀನಾಮೆ ಘೋಷಿಸಿದರು.
ತುರ್ತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಅವಕಾಶ ನೀಡಿದ್ದು, ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಿದ್ದೇನೆ. ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ತಪ್ಪಿಲ್ಲ. ಒಂದುವೇಳೆ, ಶೇ.1ರಷ್ಟು ತಪ್ಪಿದ್ದರೂ ನನ್ನ ಮನೆಯ ದೇವರು ಚೌಡೇಶ್ವರಿ ನನಗೆ ಶಿಕ್ಷೆ ನೀಡಲಿ ಎಂದು ಹೇಳಿದರು.
ನಾನು ಭಗವಂತನನ್ನು ನಂಬುತ್ತೇನೆ. ಆ ದೇವರೇ ನನಗೆ ಈ ಪ್ರಕರಣದಿಂದ ದೋಷಯುಕ್ತನಾಗಿ‌ಹೊರಗೆ ತರಲಿದ್ದಾರೆ ಎಂದು ಭಾವುಕರಾಗಿ ಹೇಳಿದರು.
ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ.‌ ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

error: Content is protected !!