ಕೋವಿಡ್ ರಿಪೋರ್ಟ್: ಶಿವಮೊಗ್ಗ 12, ಭದ್ರಾವತಿ 3 ಪಾಸಿಟಿವ್, ಇನ್ನುಳಿದ ತಾಲೂಕು ಮಾಹಿತಿ ಇಲ್ಲಿದೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶಿವಮೊಗ್ಗ ತಾಲೂಕಿನಲ್ಲಿ 12 ಮತ್ತು ಭದ್ರಾವತಿಯಲ್ಲಿ ಮೂರು ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇನ್ನುಳಿದಂತೆ ಸಾಗರ, ಶಿಕಾರಿಪುರದಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ.
ಮಂಗಳವಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ 17 ಜನರಿಗೆ ಸೋಂಕು ತಗಲಿದೆ. 25 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಂದೂ ಯಾವುದೇ ಸಾವು ಸಂಭವಿಸಿಲ್ಲ. ಇದುವರೆಗೆ 348 ಮಂದಿ ಸಾವನ್ನಪ್ಪಿದ್ದಾರೆ.
ಗಂಟಲು ದ್ರವದ ಮಾದರಿ ಸಂಗ್ರಹ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು, ಮಂಗಳವಾರದಂದು 2331 ಜನರ ಮಾದರಿ ಸಂಗ್ರಹಿಸಲಾಗಿದೆ. 1971 ನೆಗೆಟಿವ್ ಬಂದಿವೆ. ಇನ್ನುಳಿದಂತೆ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿ 49 ಜನರು ಚಿಕಿತ್ಸೆ ಪಡೆಯುತ್ತಿದ್ದರೆ, ಖಾಸಗಿ ಆಸ್ಪತ್ರೆಯಲ್ಲಿ 14 ಜನರಿದ್ದಾರೆ. ಮನೆಯ ಆರೈಕೆಯಲ್ಲಿದ್ದ 44 ಜನ ಚಿಕಿತ್ಸೆಗೆ ಒಳಗಾಗಿದ್ದಾರೆ. 107 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 7194 ಕಂಟೈನ್ಮೆಂಟ್ ಜೋನ್ ಗಳನ್ನು ಗುರುತಿಸಲಾಗಿದ್ದು, 6507 ಕೈಬಿಡಲಾಗಿದೆ.

Leave a Reply

Your email address will not be published. Required fields are marked *

error: Content is protected !!