ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ, ಹೇಳಿದ್ದೇನು?

 

 

ಸುದ್ದಿ ಕಣಜ.ಕಾಂ | DISTRICT | SHIVAMOGGA AIRPORT
ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ಸೋಗಾನೆಯಲ್ಲಿ‌ ನಿರ್ಮಿಸುತ್ತಿರುವ ವಿಮಾನ‌‌ ನಿಲ್ದಾಣಕ್ಕೆ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ‌ ಬಿ.ವೈ.ರಾಘವೇಂದ್ರ ಅವರು ಸೋಮವಾರ ಭೇಟಿ‌ ನೀಡಿದರು.
ವಿವಿಧ ಕಾರ್ಯಕ್ರಮಗಳ ನಿಮಿತ್ತ ಶಿವಮೊಗ್ಗಕ್ಕೆ ಆಗಮಿಸಿರುವ ಯಡಿಯೂರಪ್ಪ ಅವರು ದಿಢೀರ್‌ ಆಗಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳ‌‌ನ್ನು ಪರಿಶೀಲಿಸಿದರು.

READ | ಶಿವಮೊಗ್ಗದಿಂದ ಕಿಸಾನ್ ರೈಲು ಸಂಚಾರ

ಡಿಸೆಂಬರ್ ಒಳಗೆ ವಿಮಾನ ಹಾರಾಟ ಪಕ್ಕಾ
ಮಲೆನಾಡಿನ ಬಹು ನಿರೀಕ್ಷಿತ ಯೋಜನೆ ಇದಾಗಿದ್ದು, ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡರೆ ಈ ಭಾಗದ ಉದ್ಯಮ ಅಭಿವೃದ್ಧಿಗೆ ಅನುಕೂಲ ಆಗಲಿದೆ. ಈ ಕಾರಣಕ್ಕಾಗಿಯೇ ಕಾಮಗಾರಿ ತ್ವರಿತವಾಗಿ ಮಾಡಲಾಗುತ್ತಿದೆ. ಬರುವ ಡಿಸೆಂಬರ್ ಒಳಗೆ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೌಲಭ್ಯಗಳ‌ ವಿಚಾರದಲ್ಲಿ‌ ಶಿವಮೊಗ್ಗ ವಿಮಾನ‌ ನಿಲ್ದಾಣ ಬೆಂಗಳೂರು ನಂತರದ ಸ್ಥಾನದಲ್ಲಿದೆ. ನೈಟ್ ಲ್ಯಾಂಡಿಂಗ್ ಸೌಲಭ್ಯವೂ ಇದೆ ಎಂದರು.
ಸಂಸದ ಬಿ.ವೈ.ರಾಘವೇಂದ್ರ ಇತರರು ಉಪಸ್ಥಿತರಿದ್ದರು.

error: Content is protected !!