ಶಿವಮೊಗ್ಗಕ್ಕೆ ಬರಲಿದ್ದಾರೆ ಡಿಕೆಶಿ, ದಿನೇಶ್ ಗುಂಡೂರಾವ್

 

 

ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ರಾಜ್ಯ ಸರ್ಕಾರದ ಕೋಮುವಾದ, ಬೆಲೆ ಏರಿಕೆ, ಭ್ರಷ್ಟಾಚಾರದಂತಹ ಗಂಭೀರ ಸಮಸ್ಯೆಗಳನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ನಿಂದ ನಗರದಲ್ಲಿ ಏಪ್ರಿಲ್ 23ರಂದು ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ತಿಳಿಸಿದರು.

READ | ಏ.20ರಂದು ಶಿವಮೊಗ್ಗದ ಹಲವೆಡೆ ಕರೆಂಟ್ ಇರಲ್ಲ

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ಗ್ ಮುಖಂಡ ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಮತ್ತು ಜಿಲ್ಲೆಯ ವಿವಿಧ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಅದೇ ದಿನ ಗೋಪಿ ವೃತ್ತದಲ್ಲಿ ಬಹಿರಂಗ ಸಭೆ ಏರ್ಪಡಿಸಲಾಗುವುದು ಎಂದು ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಪಕ್ಷದ ಪ್ರಮುಖರಾದ ಸಿ.ಎಸ್. ಚಂದ್ರಭೂಪಾಲ್, ಯಮುನಾ ರಂಗೇಗೌಡ, ರೇಖಾ ರಂಗನಾಥ್, ಎಚ್.ಸಿ.ಯೋಗೀಶ್, ಕೆ.ರಂಗನಾಥ್, ಚಂದ್ರಶೇಖರ್, ಎನ್.ಟಿ. ಕುಮಾರ್ ಉಪಸ್ಥಿತರಿದ್ದರು.

error: Content is protected !!