ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಫಿಕ್ಸ್ ಆಯ್ತು ಹೆಸರು, ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

 

 

ಸುದ್ದಿ ಕಣಜ.ಕಾಂ | KARNATAKA | SHIVAMOGGA AIRPORT
ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಸೋಗಾನೆಯ ವಿಮಾನ ನಿಲ್ದಾಣಕ್ಕೆ ಬುಧವಾರ ಭೇಟಿ ನೀಡಿದ್ದು, ಅಲ್ಲಿನ ಕಾಮಗಾರಿಗಳನ್ನು ವೀಕ್ಷಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ `ಬಿ.ಎಸ್.ಯಡಿಯೂರಪ್ಪ’ ಅವರ ಹೆಸರು ಇಡಲಾಗುವುದು ತಿಳಿಸಿದ್ದಾರೆ.

READ | ಶಿವಮೊಗ್ಗ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, 15 ವರ್ಷಗಳ ಬಳಿಕ ಮಹತ್ವದ ಬೆಳವಣಿಗೆ, ಉಡಾನ್ ಗುತ್ತಿಗೆಗೆ ಆಹ್ವಾನ, ಇದರಿಂದ ಜನರಿಗೇನು ಪ್ರಯೋಜನ

ಈಗಾಗಲೇ ರಾಜ್ಯ ಸಂಪುಟದಲ್ಲಿ ಯಡಿಯೂರಪ್ಪ ಅವರ ಹೆಸರು ನಾಮಕರಣ ಮಾಡುವುದಕ್ಕೆ ಒಪ್ಪಿಗೆ ಸಿಕ್ಕಿದೆ. ಅದನ್ನು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು. ಅಲ್ಲಿಯೂ ಗ್ರೀನ್ ಸಿಗ್ನಲ್ ಸಿಕ್ಕಿದ ಬಳಿಕ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಹೇಳಿದರು.
ಇದೇ ವರ್ಷ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿಯೂ ಆರಂಭಿಸಲಾಗುವುದು. ಜತೆಗೆ ಕಾರವಾರದ್ದು ಶುರುವಾಗಲಿದೆ. ಶಿವಮೊಗ್ಗ ವಿಮಾನ ನಿಲ್ದಾಣವು ರಾಜ್ಯದಲ್ಲೇ ಎರಡನೇ ದೊಡ್ಡದಾಗಿದೆ. ರನ್ ವೇ ಕೂಡ ಉದ್ದವಾಗಿದೆ ಎಂದು ತಿಳಿಸಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಉಪಸ್ಥಿತರಿದ್ದರು.

error: Content is protected !!