ಸುದ್ದಿ ಕಣಜ.ಕಾಂ | DISTRICT | VISL, MPM
ಶಿವಮೊಗ್ಗ: ನಗರದ ಹರ್ಷ ದಿ ಫರ್ನ್ ಹೋಟೆಲ್’ನಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭದ್ರಾವತಿಯಲ್ಲಿರುವ ವಿಐಎಸ್’ಎಲ್, ಎಂಪಿಎಂ ಪುನಶ್ಚೇತನದ ಬಗ್ಗೆ ಮಾತನಾಡಿದ್ದಾರೆ.
ಶಿವಮೊಗ್ಗ ಕೈಗಾರಿಕಾ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯನ್ನೇ ಮಾಡಿರುವ ಉಭಯ ಕೈಗಾರಿಕೆಗಳ ಖಾಸಗೀಕರಣಕ್ಕೆ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ಕಾರ್ಖಾನೆಗೆ ಸೂಕ್ತ ಸ್ಥಳಾವಕಾಶ ಜಾಗವಿಟ್ಟುಕೊಂಡು, ಉಳಿದ ಜಾಗವನ್ನು ಇತರೆ ಕಾರ್ಖಾನೆಗಳ ಸ್ಥಾಪನೆಗೆ ಬಳಸಿಕೊಳ್ಳಲು ಅನುಮತಿ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
READ | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಫಿಕ್ಸ್ ಆಯ್ತು ಹೆಸರು, ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ಎಂಪಿಎಂ ಪುನಶ್ಚೇತನಕ್ಕೆ ಟೆಂಡರ್ ಕರೆದಿದ್ದರೂ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಇದರ ಬಗ್ಗೆ ಉನ್ನತ ಮಟ್ಟದ ಸಮಿತಿಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಬಿಜೆಪಿ ಮುಖಂಡ ಎಸ್.ದತ್ತಾತ್ರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.