ಸುದ್ದಿ ಕಣಜ.ಕಾಂ | KARNATAKA | GOVERNMENT EMPLOYEES DAY
ಶಿವಮೊಗ್ಗ: ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಯದಲ್ಲಿ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ
ಸರ್ಕಾರಿ ನೌಕರರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದರು.
ಈ ವೇಳೆ ಮಾತನಾಡಿದ ಅವರು, ಸರ್ಕಾರ ಮತ್ತು ಜನ ಸಾಮಾನ್ಯರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಸದಾ ಬದ್ದವಾಗಿದೆ ಎಂದು ಹೇಳಿದರು.
ಪ್ರಸ್ತುತ ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದರೂ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡು ಅಧಿಕಾರಿ/ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿರುವುದಕ್ಕೆ ಅಭಿನಂದನೆ. ಸರ್ಕಾರಿ ನೌಕರರಿಗೆ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಪರಿಶ್ರಮವೂ ಕಾರಣವಾಗಿದೆ. ಷಡಾಕ್ಷರಿ ಅವರ ಹಿಂದಿನ ಧೀಶಕ್ತಿ ಯಡಿಯೂರಪ್ಪನವರು.
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು
ಸಂಸದರಾದ ಬಿ.ವೈ.ರಾಘವೇಂದ್ರ ಮಾತನಾಡಿ, ರಾಜ್ಯ ಸರ್ಕಾರವು ಸರ್ಕಾರಿ ನೌಕರರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವಂತಹ ವೇತನ ಮತ್ತು ಸೌಲಭ್ಯಗಳನ್ನು ನೀಡಿದೆ. ಕಾನೂನು ರೂಪಿಸುವವರು ನಾವಾದರೂ ಅದನ್ನು ಜಾರಿಗೆ ತರುವ ಜವಾಬ್ದಾರಿ ನಿಮ್ಮ ಮೇಲಿದೆ. ಸಾಕಷ್ಟು ಅಭಿವೃದ್ದಿ ಕಾರ್ಯಗಳಾದ ಬಗ್ಗೆ ಹೆಮ್ಮ, ಗೌರವ ಸಲ್ಲುತ್ತಿರುವುದು ಕೂಡ ನಿಮ್ಮ ಪರಿಶ್ರಮದಿಂದ ಎಂದ ಹೇಳಬಯಸುತ್ತೇನೆ.
READ | ಮೌಖಿಕ ಆದೇಶದ ಮೇಲೆ ಯಾವುದೇ ಕಾಮಗಾರಿ ಮಾಡುವಂತಿಲ್ಲ, ನಿಯಮ ಮೀರಿದ್ರೆ ಅಧಿಕಾರಿಗಳಿಗೆ ಕಂಟಕ, ಬೊಮ್ಮಾಯಿ ಸೂಚನೆ
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಾಕ್ಷರಿ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದಲ್ಲಿ 6 ಲಕ್ಷ ಸರ್ಕಾರಿ ನೌಕರರಿದ್ದು, ದೇಶದಲ್ಲೇ ಪ್ರಥಮವಾಗಿ ರಾಜ್ಯದಲ್ಲಿ ಸರ್ಕಾರಿ ನೌಕರರ ದಿನಾಚರಣೆ ಘೋಷಿಸಿರುವ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ 31 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಸರ್ಕಾರಿ ನೌಕರರ ದಿನಾಚರಣೆ ಮತ್ತು ಸರ್ವೋತ್ತಮ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಉನ್ನತ ಶಿಕ್ಷಣ,ಮಾಹಿತಿ ತಂತ್ರಜ್ಞಾನ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಶ್ವಥನಾರಾಯಣ, ಶಾಸಕರಾದ ಲಕ್ಷ್ಮಣ ಸವದಿ, ಅಶೋಕ್ ನಾಯ್ಕ್, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಕಾಡಾ ಅಧ್ಯಕ್ಷರಾದ ಪವಿತ್ರ ರಾಮಯ್ಯ, ಪಾಲಿಕೆ ಮಹಾಪೌರ ಸುನೀತಾ ಅಣ್ಣಪ್ಪ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿ.ಪಂ ಸಿಇಓ ಎಂ.ಎಲ್.ವೈಶಾಲಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಮತ್ತು ತಾಲ್ಲೂಕು ಶಾಖೆ ಪದಾಧಿಕಾರಿಗಳು ಹಾಜರಿದ್ದರು.