ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಕಾಪಾಡಲು ಎಬಿವಿಪಿ ಆಗ್ರಹ

 

 

ಸುದ್ದಿ ಕಣಜ.ಕಾಂ | DISTRICT | PROTEST NEWS
ಶಿವಮೊಗ್ಗ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಕಾಪಾಡಬೇಕು ಎಂದು ಅಖಿಲ‌ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಗ್ರಹಿಸಿದೆ.
ಜಿಲ್ಲಾಡಳಿತದ ಮೂಲಕ‌ ರಾಜ್ಯ ಸರ್ಕಾರಕ್ಕೆ ಮನವಿ‌ ಪತ್ರ ಸಲ್ಲಿಸಿದ ಪ್ರತಿಭಟನಾಕಾರರು, ಸರ್ಕಾರಿ‌ ನೌಕರಿಗಳ ನೇಮಕಾತಿ ಸಂದರ್ಭದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಯಬೇಕು ಎಂದು ಮನವಿ‌ ಮಾಡಿದ್ದಾರೆ.
ಪಿಎಸ್.ಐ ಹಗರಣದ ತನಿಖೆ ಪಾರದರ್ಶಕವಾಗಿ‌ ನಡೆಸಿ ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ‌ ವಿರುದ್ಧ‌ ಕಠಿಣ‌ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಎಬಿವಿಪಿ ಕಾರ್ಯಕರ್ತರು ಉಪಸ್ಥಿತರಿದ್ದರು

error: Content is protected !!