ಶಿವಮೊಗ್ಗ ಜಿಲ್ಲೆಯಾದ್ಯಂತ ರಾತ್ರಿಯಿಡೀ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ, ಯೆಲ್ಲೋ‌ ಅಲರ್ಟ್ ಮುನ್ಸೂಚನೆ

Heavy rain brings 1

 

 

ಸುದ್ದಿ ಕಣಜ.ಕಾಂ | DISTRICT | RAIN FALL
ಶಿವಮೊಗ್ಗ: ಜಿಲ್ಲೆಯಾದ್ಯಂತ ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಮಂಗಳವಾರ ಬೆಳಗ್ಗೆ ಕೂಡ ಮೋಡ‌ ಕವಿದ ವಾತಾವರಣ ಹಾಗೂ ಜಿಟಿ ಮಳೆಯಾಗುತ್ತಿದೆ.
ಶಿವಮೊಗ್ಗ ನಗರದ ಸೇರಿದಂತೆ ಸಾಗರ , ಹೊಸನಗರ, ಶಿಕಾರಿಪುರ, ಭದ್ರಾವತಿ ಹೀಗೆ ಜಿಲ್ಲೆಯ ನಾನಾ ಕಡೆಗಳಲ್ಲಿ ಮಳೆ ಸುರಿದಿದೆ. ಪರಿಣಾಮ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಅದರಲ್ಲೂ ಸ್ಮಾರ್ಟ್‌ ಸಿಟಿ ನಡೆಯುತ್ತಿರುವ ಶಿವಮೊಗ್ಗ ನಗರದಲ್ಲಿ ಗುಂಡಿಗಳಲ್ಲಿ ನೀರು ತುಂಬಿಕೊಂಡಿದ್ದು, ವಾಹನ ಸವಾರರು ಸಂಚರಿಸುವುದೇ ಕಷ್ಟವಾಗಿದೆ. ಪ್ರಮುಖ ರಸ್ತೆಗಳಲ್ಲೂ ನೀರು ಆವೃತವಾಗಿದ್ದು, ಜನ ಕಷ್ಟಪಡುವಂತಾಗಿದೆ.
ಮಳೆ‌ ಮುಂದುವರಿಕೆ ಸಾಧ್ಯತೆ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶ ಭರಿತ ಮೋಡಗಳ ಪರಿಣಾಮ ಮೇ 18ರಿಂದ ಮಳೆ‌ಇನ್ನಷ್ಟು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ಕೊಡಗು ಮತ್ತು ಹಾಸನಗಳಲ್ಲಿ ಯೆಲ್ಲೋ‌ ಅಲರ್ಟ್ ಘೋಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!