ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಮುಂದುವರಿಕೆ

IMG 20220518 151421 1

 

 

ಸುದ್ದಿ ಕಣಜ.ಕಾಂ | DISTRICT | SCHOOL HOLIDAY
ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ ಎಡೆಬಿಡದೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎರಡನೇ ದಿನವೂ ಶಾಲೆಗಳಿಗೆ ರಜೆ ಮುಂದುವರಿಸಲು ಆದೇಶ ಹೊರಡಿಸಿದೆ.
ಬೆಳಗ್ಗೆಯಿಂದ ನಿರಂತರ ಮಳೆ ಸುರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಗುರುವಾರ ಶಾಲೆಗಳಿಗೆ ರಜೆ ನೀಡಲಾಗಿತ್ತು. ಪರಿಸ್ಥಿತಿ ಅದೇ ರೀತಿ ಮುಂದುವರಿದಿರುವುದರಿಂದ ಹಾಗೂ ಹಲವೆಡೆ ಪ್ರವಾಹ ಉಂಟಾಗಿದ್ದು ಮೇ‌ 20 ರಂದು ಸಹ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!