ಮುಂಗಾರಿಗೂ‌ ಮುನ್ನ ಈ ಎಲ್ಲ‌ ಕೆಲಸ‌ ಮಾಡುವಂತೆ ಜಿಲ್ಲಾ ಉಸ್ತುವಾರಿ‌ ಸಚಿವರ‌ ಖಡಕ್‌ ವಾರ್ನಿಂಗ್, ₹90 ಕೋಟಿ ವೆಚ್ಚದಲ್ಲಿ ಮಾಸ್ಟರ್ ಪ್ಲ್ಯಾನ್‌

Narayanagowda rain meeting

 

 

ಸುದ್ದಿ ಕಣಜ.ಕಾಂ | DISTRICT | FLOOD MEETING
ಶಿವಮೊಗ್ಗ: ಸದ್ಯದಲ್ಲೇ ಆರಂಭವಾಗಲಿರುವ ಮುಂಗಾರು ಅವಧಿಯಲ್ಲಿ ಮಳೆಯ ಹಾನಿಯನ್ನು ತಪ್ಪಿಸಲು ಮುಂಜಾಗರೂಕತಾ ಕ್ರಮಗಳನ್ನು ಈಗಲೇ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ (KC Narayanagowda) ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚಿನ ಮಳೆಯಿಂದ ಉಂಟಾಗಿರುವ ಹಾನಿ ಕುರಿತು ಪರಿಶೀಲನಾ ಸಭೆ ನಡೆಸಿದರು.

READ | ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಭದ್ರಾವತಿ ಮಹಿಳೆ, ಹೇಗಿದೆ ಮಕ್ಕಳ ಸ್ಥಿತಿ?

ಅಧಿಕಾರಿಗಳಿಗೆ ನೀಡಿದ ಸೂಚನೆಗಳೇನು?

  1. ಕೆರೆಗಳ ಏರಿ ದುರ್ಬಲವಾಗಿರುವುದನ್ನು ಗುರುತಿಸಿ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು.
  2. ಮರದ ಕೊಂಬೆಗಳು ವಿದ್ಯುತ್ ಕಂಬಗಳ ಮೇಲೆ ಬೀಳದಂತೆ ಅವುಗಳನ್ನು ತೆರವುಗೊಳಿಸಬೇಕು.
  3. ಹಾನಿಗೀಡಾಗಿರುವ ಸಂಪರ್ಕ ರಸ್ತೆಗಳ ದುರಸ್ತಿ, ಕೆರೆ ದುರಸ್ತಿ ಕಾರ್ಯಗಳನ್ನು ಕೈಗೊಂಡು ಮತ್ತೆ ಕರೆ ಒಡೆಯದಂತೆ ಎಚ್ಚರಿಕೆ ವಹಿಸಬೇಕು.
  4. ಶಿವಮೊಗ್ಗ ನಗರದಲ್ಲಿ ರಾಜಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಹೂಳೆತ್ತುವ ಕಾರ್ಯವನ್ನು ಮಾಡಬೇಕು.

ಜಿಲ್ಲೆಯಲ್ಲಿ ಮಳೆ ಹಾನಿ ವಿವರ
ಕಳೆದ ವಾರ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಬೆಳೆಗಳು ಹಾಗೂ ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿ ಉಂಟಾಗಿದೆ. 24 ರಸ್ತೆ, 20 ಸೇತುವೆ (Bridge) ಮತ್ತು ಮೋರಿಗಳು, 427 ವಿದ್ಯುತ್ ಕಂಬಗಳು, 54 ವಿದ್ಯುತ್ ಪರಿವರ್ತಕಗಳು(TC’s), 24 ಶಾಲಾ ಕಟ್ಟಡ(school building), 17 ಅಂಗನವಾಡಿ ಕಟ್ಟಡಗಳು, 43 ಕೆರೆ(lake)ಗಳಿಗೆ ಹಾನಿ ಉಂಟಾಗಿದೆ. 2,139 ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ. 5 ಮನೆಗಳಿಗೆ ತೀವ್ರ ಹಾನಿ ಉಂಟಾಗಿದ್ದು, 257 ಮನೆಗಳಿಗೆ ಭಾಗಶಃ ಹಾನಿ ಸಂಭವಿಸಿದೆ.
486 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆಗಳಿಗೆ ಹಾಗೂ 2,518 ಹೆಕ್ಟೇರ್ ವ್ಯಾಪ್ತಿಯಲ್ಲಿ ಮೆಕ್ಕೆಜೋಳ ಬೆಳೆಗಳಿಗೆ ಹಾನಿ ಉಂಟಾಗಿದೆ. 154 ಹೆಕ್ಟೇರ್ ಬಾಳೆ ಸೇರಿದಂತೆ 178 ಹೆಕ್ಟೇರ್ ತೋಟಗಾರಿಕಾ ಬೆಳೆಗಳೂ ಹಾನಿಗೀಡಾಗಿವೆ. ಮೆಕ್ಕೆಜೋಳ ಮತ್ತು ಭತ್ತವನ್ನು ಕಟಾವು ಮಾಡಿ ರಾಶಿ ಹಾಕಿದ್ದ ಫಸಲು ಮಳೆಯಿಂದ ಸಂಪೂರ್ಣ ಹಾನಿಗೀಡಾಗಿದ್ದು 210ರೈತರು ಇದರಿಂದ ನಷ್ಟ ಅನುಭವಿಸಿದ್ದಾರೆ. ಇದರಲ್ಲಿ 8,775 ಕ್ವಿಂಟಾಲ್ ಭತ್ತ (paddy) ಹಾಗೂ 68,670 ಕ್ವಿಂಟಾಲ್ ಮೆಕ್ಕೆಜೋಳ (Maze) ಇಳುವರಿ ಸೇರಿದೆ. ಇದರಲ್ಲಿ ಶೇ.90ರಷ್ಟು ಇಳುವರಿ ನಾಶವಾಗಿದೆ. ಪರಿಹಾರ ಧನ ನೀಡಲು ಅನುದಾನ ಕೊರತೆಯಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು.

READ | ಫ್ರೀಡಂ ಪಾರ್ಕ್‍ನಲ್ಲಿ ರಾಶಿ ರಾಶಿ ಮದ್ಯದ ಬಾಟಲಿ!

ಮಳೆ ಹಾನಿ ‌ತಪ್ಪಿಸಲು‌ ಮಾಸ್ಟರ್‌ ಪ್ಲ್ಯಾನ್‌
ಶಿವಮೊಗ್ಗ ನಗರದಲ್ಲಿ ಮಳೆ ಹಾನಿ ತಪ್ಪಿಸಲು ₹99 ಕೋಟಿ ಅಂದಾಜು ವೆಚ್ಚದಲ್ಲಿ ಸಮಗ್ರ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಕಾಲುವೆಗಳಲ್ಲಿನ ಹೂಳೆತ್ತುವ ಕಾರ್ಯ ಸೇರಿದಂತೆ ಮುಂಜಾಗರೂಕತಾ ಕಾಮಗಾರಿಗಳನ್ನು ಮಳೆಗಾಲ ಆರಂಭಕ್ಕಿಂತ ಮೊದಲು ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಕುಮಾರ ಬಂಗಾರಪ್ಪ, ಕೆ.ಬಿ.ಅಶೋಕ ನಾಯ್ಕ್, ಡಿ.ಎಸ್.ಅರುಣ್, ಮೇಯರ್ ಸುನೀತಾ ಅಣ್ಣಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

https://suddikanaja.com/2021/11/06/pulsar-gang-arrested-in-shivamogga/

Leave a Reply

Your email address will not be published. Required fields are marked *

error: Content is protected !!