ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್ 9 ರಂದು ಬೆಳಗ್ಗೆ 10 ಗಂಟೆಗೆ ಗುತ್ಯಪ್ಪ ಕಾಲೋನಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
READ | ಜನೌಷಧಿ ಮಳಿಗೆ ತೆರೆಯಬೇಕೆ? ಕೂಡಲೇ ಅರ್ಜಿ ಅರ್ಜಿ ಸಲ್ಲಿಸಿ
ಎಸ್ಎಸ್ಎಲ್ಸಿ, ಐಟಿಐ ಮತ್ತು ಡಿಪ್ಲೋಮಾ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೊಡೇಟಾ(ರೆಸ್ಯೂಮ್) ಮತ್ತು ಆಧಾರ್ ಕಾರ್ಡ್ ಪ್ರತಿ ತೆಗೆದುಕೊಂಡು ಸಂದರ್ಶನಲ್ಲಿ ಭಾಗವಹಿಸಬಹುದು.
ಪ್ರವೇಶ ಉಚಿತವಾಗಿದ್ದು ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9108235132, 9482023412 ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.