ಡಿ.ಎಚ್. ಶಂಕರಮೂರ್ತಿ ಸೇರಿ 6 ಜನರಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್, ಯಾರಿಗೆಲ್ಲ ಲಭಿಸಿದೆ?

Kuvempu university

 

 

ಸುದ್ದಿ ಕಣಜ.ಕಾಂ | DISTRICT | EDUCATION CORNER
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ(Kuvempu university)ವು ಜೂ.16ರಂದು ಏರ್ಪಡಿಸಿರುವ 31 ಮತ್ತು 32ನೇ ಘಟಿಕೋತ್ಸವದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಅಪಾರ ಸೇವೆ ಸಲ್ಲಿಸಿರುವ ಸಾರ್ವಜನಿಕ ಆಡಳಿತದಲ್ಲಿ ಅಪಾರ ಸೇವೆ ಸಲ್ಲಿಸಿರುವ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅವರು ಮತ್ತು ಇತರೆ ಐದು ಜನರಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದೆ.
ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗವು ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿರುವ ವಿವಿಯ ಆಡಳಿತವು, ಎರಡು ಘಟಿಕೋತ್ಸವಗಳಿಂದ ಒಟ್ಟು ಆರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ.
ಕೊರೊನಾ ಹಾವಳಿ ಹಾಗೂ ಅತಿಥಿಗಳ ಸಮಯ ಹೊಂದಾಣಿಕೆ ಸಾಧ್ಯವಾಗದ ಕಾರಣ ನನೆಗುದಿಗೆ ಬಿದ್ದಿದ್ದ ವಿವಿಯ ಎರಡು ಶೈಕ್ಷಣಿಕ ಘಟಿಕೋತ್ಸವಗಳನ್ನು ಪ್ರಸ್ತುತ ಜೂನ್ 16ರಂದು ಒಂದೇ ದಿನ ನಡೆಸಲು ವಿಶ್ವವಿದ್ಯಾಲಯವು ಮುಂದಾಗಿದೆ. 2019-20 ಮತ್ತು 2020-21ನೇ ಸಾಲಿನ ಘಟಿಕೋತ್ಸವಗಳನ್ನು ರಾಜ್ಯಪಾಲರ ಅನುಮತಿ ಮೇರೆಗೆ ಒಂದೇ ದಿನ ಆಯೋಜಿಸಲು ಸಿದ್ಧತೆ ಕೈಗೊಂಡಿದೆ ಎಂದು‌‌ ತಿಳಿಸಲಾಗಿದೆ.
ಯಾವ ಘಟಿಕೋತ್ಸವ ಯಾರಿಗೆ ಗೌರವ ಡಾಕ್ಟರೇಟ್?
31ನೇ ಘಟಿಕೋತ್ಸವದ ಭಾಗವಾಗಿ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಶಿಕ್ಷಣ ತಜ್ಞೆ ಗೀತಾ ನಾರಾಯಣನ್ ಹಾಗೂ ಯೋಗ ಗುರು ಭ.ಮ. ಶ್ರೀಕಂಠ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. 32ನೇ ಘಟಿಕೋತ್ಸವದ ಭಾಗವಾಗಿ ಶಿಕ್ಷಣತಜ್ಞ, ವಿಶ್ರಾಂತ ಕುಲಪತಿ ಪ್ರೊ. ಟಿ. ವಿ. ಕಟ್ಟಿಮನಿ, ಅಂಧ ಕ್ರಿಕೆಟಿಗ ಮಹಾಂತೇಶ್ ಜಿ. ಕಿವಡಸಣ್ಣವರ್, ಯೋಗಗುರು ಬಾ. ಸು. ಅರವಿಂದ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ.
ಘಟಿಕೋತ್ಸವ ಕಾರ್ಯಕ್ರಮಕ್ಕೆ ಕುಲಾಧಿಪತಿ ಮತ್ತು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಸಹ ಕುಲಾಧಿಪತಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಆಗಮಿಸಿಲಿದ್ದಾರೆ. ಎರಡೂ ಘಟಿಕೋತ್ಸವಗಳ ಮುಖ್ಯ ಭಾಷಣವನ್ನು ಮೈಸೂರಿನ ಭಾರತೀಯ ಆಹಾರ ತಾಂತ್ರಿಕ ಸಂಶೋಧನಾಲಯದ ನಿರ್ದೇಶಕಿ ಡಾ. ಶ್ರೀದೇವಿ ಅನ್ನಪೂರ್ಣ ಸಿಂಗ್ ಮಾಡಲಿದ್ದಾರೆ.

https://suddikanaja.com/2021/11/24/shivamogga-agriculture-university-convocation-2021-bharat-biotech-owner-dr-krishnamurthy-facilitating-with-honorary-doctorate/

Leave a Reply

Your email address will not be published. Required fields are marked *

error: Content is protected !!