4‌ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ವೈದ್ಯರು ಹೇಳಿದ್ದೇನು?

Sarji Hospital

 

 

ಸುದ್ದಿ ಕಣಜ.ಕಾಂ‌ | DISTRICT | HEALTH NEWS
ಶಿವಮೊಗ್ಗ: ನಗರದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಕಳೆದ ತಿಂಗಳು 23ರಂದು ಜನಿಸಿದ ಅಪರೂಪದ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದ ಭದ್ರಾವತಿ ತಾಲೂಕು ತಡಸ ಗ್ರಾಮದ ಅಲ್ಮಾಸ್ ಬಾನು ಅವರು ಆರೋಗ್ಯವಂತ ನಾಲ್ಕೂ ಮಕ್ಕಳೊಂದಿಗೆ ಮನೆಗೆ ಮರಳುತ್ತಿರುವುದು ನನಗೆ ತುಂಬಾ ಸಂತಸ ತಂದಿದೆ ಎಂದು ಡಾ.ಧನಂಜಯ ಸರ್ಜಿ ತಿಳಿಸಿದ್ದಾರೆ.
ಸರ್ಜಿ ಆಸ್ಪತ್ರೆಯಲ್ಲಿ ತಾಯಿ ಮತ್ತು ಮುದ್ದಾದ 4 ಮಕ್ಕಳನ್ನು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಅತ್ಯಂತ ಸಂತೋಷದಿಂದ ಗುರುವಾರ ಬೀಳ್ಕೊಟ್ಟರು.

READ | ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಭದ್ರಾವತಿ ಮಹಿಳೆ, ಹೇಗಿದೆ ಮಕ್ಕಳ ಸ್ಥಿತಿ?

ಕಡಿಮೆ ಖರ್ಚಿನಲ್ಲಿ‌‌ ಉತ್ತಮ‌ ಆರೈಕೆ
ಮಕ್ಕಳ ತೂಕ ಕಡಿಮೆ ಹಾಗೂ ಅಲ್ಪ ಪ್ರಮಾಣದ ಉಸಿರಾಟದ ತೊಂದರೆ ಇದ್ದರಿಂದ ನವಜಾತ ಶಿಶುಗಳನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಯಿತು. ಅಲ್ಲದೇ 2 ಶಿಶುಗಳಿಗೆ ಸಿಪ್ಯಾಪ್ ಅಳವಡಿಸಿ, ಇನ್ನೆರಡು ಶಿಶುಗಳಿಗೆ ಆಕ್ಷಿಜನ್, ಕಾಂಗೂರು ಮದರ್ ಕೇರ್ ಹಾಗೂ ಆಗಾಗ ಸೂಕ್ತ ಚಿಕಿತ್ಸೆ ನೀಡುವುದರ ಮೂಲಕ ಎದೆ ಹಾಲು ನೀಡಲಾಯಿತು. ಈಗ ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ.
ಮಕ್ಕಳು ಜನಿಸಿದ ಬಳಿಕ ಆರೋಗ್ಯದಲ್ಲಿ ಹಲವು ಸಮಸ್ಯೆಗಳು ಕಂಡು ಬಂದಿದ್ದವು. ಆ ಸಂದರ್ಭ ಶಿಶುಗಳನ್ನು ರಕ್ಷಣೆ ಮಾಡುವುದೇ ಆಸ್ಪತ್ರೆಯ ವೈದ್ಯರಿಗೆ ದೊಡ್ಡ ಸವಾಲಾಗಿತ್ತು. ಆದರೆ, ನಮ್ಮ ಆಸ್ಪತ್ರೆಯ ವೈದ್ಯರ ಬಳಗ ಅತ್ಯಂತ ನಿಗಾ ವಹಿಸಿ ಚಿಕಿತ್ಸೆ ನೀಡಿದೆ. ಪರಿಣಾಮ ಆರೋಗ್ಯ ಪೂರ್ಣ ಮಕ್ಕಳೊಂದಿಗೆ ಅಲ್ಮಾಸ್ ಅವರು ತಮ್ಮ ಊರಿಗೆ ತೆರಳುತ್ತಿದ್ದಾರೆ. ಇದು ಆಸ್ಪತ್ರೆಯ ವೈದ್ಯ ವೃಂದದಲ್ಲಿ ಅತ್ಯಂತ ಸಂತಸವನ್ನು ಉಂಟುಮಾಡಿದೆ. ಅಲ್ಲದೆ ಅತಿ ಕಡಿಮೆ ದರದಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯಕೀಯ ನಿರ್ದೇಶಕ ಡಾ. ಧನಂಜಯ ಸರ್ಜಿ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ನಿರ್ದೇಶಕರಾದ ನಮಿತಾ ಸರ್ಜಿ, ವೈದ್ಯಕೀಯ ಅಧೀಕ್ಷಕರಾದ ಡಾ. ಎಚ್.ಎಸ್.ಸತೀಶ್, ಆಡಳಿತಾಧಿಕಾರಿ ಕೆ.ಆರ್.ಪುರುಷೋತ್ತಮ, ಪ್ರಸೂತಿ ಮತ್ತು ಹೆರಿಗೆ ತಜ್ಞ ವೈದ್ಯರಾದ ಡಾ.ಚೇತನಾ, ಮಕ್ಕಳ ತಜ್ಞ ವೈದ್ಯರಾದ ಡಾ.ಅನಿಲ್ ಕಲ್ಲೇಶ್ ಉಪಸ್ಥಿತರಿದ್ದರು.

https://suddikanaja.com/2022/01/24/covid-is-the-third-wave-of-the-virus-so-it-does-not-have-much-impact-on-the-health-of-the-children-said-dr-dhananjaya-sarji/

Leave a Reply

Your email address will not be published. Required fields are marked *

error: Content is protected !!