ಅಡಿಕೆ ಧಾರಣೆಯ ಬಗ್ಗೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಮಹತ್ವದ ಹೇಳಿಕೆ, ಕೇಂದ್ರಕ್ಕೆ ಭೇಟಿ ನೀಡಲಿದೆ ನಿಯೋಗ

Araga jnanendra

 

 

ಸುದ್ದಿ ಕಣಜ.ಕಾಂ | KARNATAKA | ARECANUT
ಬೆಂಗಳೂರು: ಅಡಿಕೆ ಧಾರಣೆ ಬಗ್ಗೆ ರೈತರಲ್ಲಿ ಯಾವುದೇ ಆತಂಕ ಪಡುವುದು ಬೇಡ ಎಂದಿರುವ ಗೃಹ ಸಚಿವರೂ ಹಾಗೂ ರಾಜ್ಯ ಅಡಿಕೆ ಟಾಸ್ಕ್ ಫೋರ್ಸ್ (state arecanut task force) ಅಧ್ಯಕ್ಷರೂ ಆದ ಆರಗ ಜ್ಞಾನೇಂದ್ರ (Araga Jnanendra) ಅವರು ಕೇಂದ್ರ ಸರಕಾರ ನಿಗದಿಪಡಿಸಿದ ಅಡಿಕೆ ಬೆಲೆಯ ಅಂದಾಜು ವೆಚ್ಚವನ್ನು ಪರಿಷ್ಕರಿಸಿ ಹೆಚ್ಚಳ ಮಾಡುವಂತೆ, ಒತ್ತಾಯಿಸಲು ಕೇಂದ್ರಕ್ಕೆ ನಿಯೋಗವನ್ನು ತೆಗೆದುಕೊಂಡು ಹೋಗಲಾಗುವುದು ಎಂದಿದ್ದಾರೆ.
ರಾಜ್ಯದ ಮಲೆನಾಡು ಭಾಗದ ಲಕ್ಷಾಂತರ ರೈತ ಹಾಗೂ ರೈತ ಕಾರ್ಮಿಕ ಕುಟುಂಬಗಳ ಆರ್ಥಿಕ ಬೆನ್ನೆಲುಬಾಗಿರುವ ಅಡಿಕೆ ಬೆಳೆಗೆ ಸುಸ್ಥಿರ ಬೆಲೆ ಯನ್ನು ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದೆ. ಈ ಕುರಿತು ರೈತ ಸಮುದಾಯ ಯಾವುದೇ ಆತಂಕ ಪಡುವುದು ಬೇಡ ಎಂದು ಮನವಿ ಮಾಡಿದ್ದಾರೆ.

READ | ‘ತೂತು ಮಡಿಕೆ’ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್, ಚಿತ್ರದ್ದೇನು ವಿಶೇಷ?

ಅಡಿಕೆ ಬೆಲೆ ಪುನಃ ಪರಿಷ್ಕರಣೆ
ಹಣದುಬ್ಬರ ಹಾಗೂ ಇನ್ನಿತರ ಕಾರಣಗಳಿಂದಾಗಿ ಅಡಿಕೆ ಬೆಳೆ ಉತ್ಪಾದನಾ ವೆಚ್ಚವೂ ಹೆಚ್ಚಿದ್ದು ಪ್ರಸ್ತುತ ಪ್ರತಿ ಕಿಲೋ ಅಡಿಕೆ ಅಂದಾಜು ವೆಚ್ಚ ₹25 ರಷ್ಟಿದ್ದು, ಸುಮಾರು ಆರು ವರ್ಷಗಳ ಹಿಂದೆ ನಿಗದಿ ಪಡಿಸಲಾಗಿದೆ. ಪುನಃ ಪರಿಷ್ಕರಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದಿದ್ದಾರೆ.
ಈ ಹಿಂದೆ ಕೇಂದ್ರ ಸರಕಾರ ದೇಶಿಯ ಅಡಿಕೆ ಉತ್ಪನ್ನ ಅಂದಾಜು ವೆಚ್ಚವನ್ನು ಹೆಚ್ಚಳ ಮಾಡಿದಾಗ, ವಿದೇಶದಿಂದ ಆಮದಾಗುತ್ತಿದ್ದ ಕಡಿಮೆ ಗುಣಮಟ್ಟದ ಅಡಿಕೆ ಪ್ರಮಾಣ ಗಣನೀಯವಾಗಿ ತಗ್ಗಿದ್ದನ್ನು ಸ್ಮರಿಸಿದರು‌‌. ವಿದೇಶದಿಂದ ಆಮದಾಗುವ ಅಡಿಕೆ, ಗುಣಮಟ್ಟದಲ್ಲಿ ಅತ್ಯಂತ ನಿಕೃಷ್ಟವಾಗಿದ್ದು ದೇಶಿಯ ಅಡಿಕೆ, ಗುಣಮಟ್ಟದಲ್ಲಿ ಆತ್ಯುಕೃಷ್ಟವಾಗಿದೆ ಎಂಬುವುದು ಪ್ರಮಾಣೀಕೃತವಾಗಿದೆ ಎಂದು ತಿಳಿಸಿದ್ದಾರೆ.
ಟಾಸ್ಕ್ ಫೋರ್ಸ್ ‌ನಿಯೋಗ ಭೇಟಿ
ಕೇಂದ್ರ ಕೃಷಿ ಸಚಿವರನ್ನು ರಾಜ್ಯ ಟಾಸ್ಕ್ ಫೋರ್ಸ್ (task force) ನಿಯೋಗ ಭೇಟಿಯಾಗಿ, ಅಡಿಕೆ ಉತ್ಪನ್ನ ಅಂದಾಜು ವೆಚ್ಚ ಪರಿಷ್ಕರಿಸಿ ಹೆಚ್ಚಳ ಮಾಡಲು ಮನವರಿಕೆ ಮಾಡಿ ಕೊಡಲಾಗುವುದು. ರೈತರು ಅಡಿಕೆ ಧಾರಣೆ ಬಗ್ಗೆ ಯಾವುದೇ ಆತಂಕ ಹಾಗೂ ಭಯಪಡುವುದು ಬೇಡ ಎಂದು ಸಚಿವರು ತಿಳಿಸಿದ್ದಾರೆ.

https://suddikanaja.com/2021/02/25/nann-mescom-app-developed-for-consumers/

Leave a Reply

Your email address will not be published. Required fields are marked *

error: Content is protected !!