ರೈತರಿಗೆ ಶುಭ ಸುದ್ದಿ‌ ನೀಡಿದ ಇಂಧನ ಸಚಿವ, ಟ್ರಾನ್ಸ್’ಫರ್ ಸುಟ್ಟ 24 ಗಂಟೆಯಲ್ಲಿ ಬದಲಾವಣೆ

Sunil kumar power minister

 

 

ಸುದ್ದಿ ಕಣಜ.ಕಾಂ | KARNATAKA | MESCOM
ಶಿವಮೊಗ್ಗ: ರೈತರ ಟಿಸಿ (ಟ್ರಾನ್ಸ್ ಫರ್) ಸುಟ್ಟ 24 ಗಂಟೆಯೊಳಗೆ ಟಿಸಿ ಬದಲಾವಣೆ ಮಾಡುವಂತಹ ದಾಖಲೆಯ ನಿರ್ಧಾರ ಸೇರಿದಂತೆ ವಿವಿಧ ಹೊಸ ಯೋಜನೆಗಳ ಮೂಲಕ ರಾಜ್ಯದ ವಿದ್ಯುತ್ ಸರಬರಾಜಿನಲ್ಲಿ ಪ್ರಗತಿಯನ್ನು ಸಾಧಿಸಲಾಗುತ್ತಿದೆ ಎಂದು ಇಂಧನ ಸಚಿವ ವಿ.ಸುನಿಲ್‍ಕುಮಾರ್ ತಿಳಿಸಿದರು.
ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ(MESCOM) ವತಿಯಿಂದ ನಗರದ ಮಂಡ್ಲಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮೆಸ್ಕಾಂ ನಗರ ವಿಭಾಗೀಯ ಕಚೇರಿ-2 ರ ಹಾಗೂ ಘಟಕ-6ರ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಅಭಿವೃದ್ದಿ ಒಂದು ನಿರಂತರ ಪ್ರಕ್ರಿಯೆಯಾಗಿದ್ದು ಇಂಧನ ಇಲಾಖೆಯಲ್ಲಿ ಅತ್ಯುತ್ತಮ ಸುಧಾರಣೆಗಳು ಆಗಿವೆ. ಗ್ರಾಮೀಣ ಭಾಗದಲ್ಲಿ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಹೊಂದಿರುವವರಿಗೆ ಉಚಿತ ವಿದ್ಯುತ್ ನೀಡುವ ‘ಬೆಳಕು’ ಯೋಜನೆಯಡಿ ಕೇವಲ 100 ದಿನಗಳ ಅವಧಿಯಲ್ಲಿ 2 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕ ನೀಡಲಾಗಿದೆ.

READ | ಕಟೀಲ್ ಪೈ ಕಾಲೇಜಿನಲ್ಲಿ ಹೊಸ ಕೋರ್ಸ್ ಆರಂಭಕ್ಕೆ ಗ್ರೀನ್ ಸಿಗ್ನಲ್

ರೈತರ ಸುಟ್ಟ ಟಿಸಿ ಬದಲಾವಣೆ ಮಾಡುವುದು ದೊಡ್ಡ ಸವಾಲಿನ ಕೆಲಸವಾಗಿದ್ದು ಕೇವಲ 24 ಗಂಟೆಗಳಲ್ಲಿ ಸುಟ್ಟ ಟಿಸಿ ಬದಲಾಯಿಸುವ ನಿರ್ಧಾರವನ್ನು ನಮ್ಮ ಇಲಾಖೆ ಕೈಗೊಂಡು ಈ ಕುರಿತು ಅಭಿಯಾನ ನಡೆಸಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ 250 ಕಡೆ ಟಿಸಿ ಬ್ಯಾಂಕ್, 162 ಟಿಸಿ ರಿಪೇರಿ ಕೇಂದ್ರಗಳನ್ನು ತೆರೆಯಲಾಗಿದ್ದು, ಟಿಸಿ ಸುಟ್ಟ 24 ಗಂಟೆಯೊಳಗೆ ಟಿಸಿ ಬದಲಾಯಿಸುವ ಪ್ರಕ್ರಿಯೆಯಲ್ಲಿ ಶೇ.80 ರಿಂದ 90 ಪ್ರಗತಿ ಸಾಧಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ.
ರಾಜ್ಯದಲ್ಲಿ ಕಳೆದ ತಿಂಗಳು ಟ್ರಾನ್ಸ್ ಫಾರ್ಮರ್ ನಿರ್ವಹಣೆಗಾಗಿ 10 ದಿನಗಳ ವಿದ್ಯುತ್ ಪರಿವರ್ತಕ ಅಭಿಯಾನ ಕೈಗೊಂಡು ಎಲ್ಲ ಅಧಿಕಾರಿ, ನೌಕರರು ತಮ್ಮ ಸುತ್ತಮುತ್ತ ಇರುವ ಟಿಸಿಗಳನ್ನು ಪರಿಶೀಲಿಸಿ, ರಾಜ್ಯದಲ್ಲಿ ಸುಮಾರು 8 ರಿಂದ 9 ಲಕ್ಷ ಟಿಸಿಗಳ  ನಿರ್ವಹಣೆ ಮಾಡುವ ಮೂಲಕ ಹೊಸ ದಾಖಲೆ ಮಾಡಲಾಗಿದೆ ಎಂದರು.
ಮುಖ್ಯಮಂತ್ರಿಯವರು ಎಸ್‍ಸಿ, ಎಸ್‍ಟಿ ಸಮುದಾಯಕ್ಕೆ ಉಚಿತವಾಗಿ 75 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ್ದು, ಲಕ್ಷಾಂತರ ಜನರು ಈ ಯೋಜನೆ ಉಪಯೋಗ ಪಡೆಯಲಿದ್ದಾರೆ ಎಂದರು.
ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಸದಸ್ಯರಾದ ಲಕ್ಷ್ಮೀ ಶಂಕರ ನಾಯ್ಕ್, ಕ್ರೀಡಾ ಪ್ರಾಧಿಕಾರದ ಕೆ.ಪಿ ಪುರುಷೋತ್ತಮ್, ಮೆಸ್ಕಾಂ ನಿರ್ದೇಶಕರಾದ ನಂಜುಂಡಸ್ವಾಮಿ, ಗಿರಿರಾಜ್, ದಿನೇಶ್, ಮುಖ್ಯ ಇಂಜಿನಿಯರ್, ಗುತ್ತಿಗೆದಾರರು, ಇತರೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಮೆಸ್ಕಾಂ ನೌಕರರ ಸಂಘದ ಮೋಹನ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೆಸ್ಕಾಂ ಎಇಇ ವೀರೇಂದ್ರ ಎಚ್.ಆರ್. ಸ್ವಾಗತಿಸಿದರು.

https://suddikanaja.com/2020/12/25/cs-shadakshari-address-government-employee-in-shivamogga/

Leave a Reply

Your email address will not be published. Required fields are marked *

error: Content is protected !!