ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಡಿ.ವಿ.ಎಸ್. ಕಲಾ-ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಹಾಗೂ ಜಿಲ್ಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಶಿವಮೊಗ್ಗ ಸಂಯುಕ್ತಾಶ್ರಯದಲ್ಲಿ ಜೂನ್ 30ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಉದ್ಯೋಗ ಮೇಳ(Job fair)ವನ್ನು ಆಯೋಜಿಸಲಾಗಿದೆ.
READ | ರಿಷಬ್ಶೆಟ್ಟಿ ಸಿನಿಮಾ ಆಡಿಷನ್ನಲ್ಲಿ ಶಿವಮೊಗ್ಗದ ಸ್ಟೈಲ್ ಡ್ಯಾನ್ಸ್ ಸಂಸ್ಥೆಯ ಮೂವರು ಮಕ್ಕಳು
ಗಾಂಧಿ ಪಾರ್ಕ್ (Gandhi Park) ಎದುರು ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳುವುದು. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ https://forms.gle/N8bXFEiVrJLHQ1hU9 ಲಿಂಕ್ ಬಳಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಚ್.ಎಂ.ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182 – 222646, ಮೊ.ಸಂ. 9448562530 ಅನ್ನು ಸಂಪರ್ಕಿಸುವುದು.
https://suddikanaja.com/2022/03/12/quiz-fair-competition-organized-at-manasa-international-icse-school-at-kottegangur-shimoga/