ಶಿವಮೊಗ್ಗ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿ, ಕೂಡಲೇ ಅರ್ಜಿ ಸಲ್ಲಿಸಿ

Stenographer

 

 

ಸುದ್ದಿ‌ ಕಣಜ.ಕಾಂ‌ | DISTRICT | JOB JUNCTION
ಶಿವಮೊಗ್ಗ: ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ ನಾಲ್ಕು ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://districts.ecourts.gov.in/shivamogga-onlinerecruitment ಅಥವಾ https://karnatakajudiciary.kar.nic.in/districtrecruitment.aspನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಜುಲೈ 7 ರಿಂದ 27 ರೊಳಗಾಗಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಬೇಕಿರುವ ಅರ್ಹತೆ
ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿಬೇಕು.

READ | ಶಿವಮೊಗ್ಗ ಬಳಿ ನಡೀತು ಭೀಕರ ಅಪಘಾತ, 40 ಜನರಿಗೆ ಗಾಯ, ಡ್ರೈವರ್ ಸ್ಥಿತಿ ಗಂಭೀರ

ವಿದ್ಯಾರ್ಹತೆ, ವಯೋಮಿತಿ ವಿವರ
ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರತಕ್ಕದ್ದು. ಸಾಮಾನ್ಯ ವರ್ಗಕ್ಕೆ 35 ವರ್ಷಗಳು, 2ಎ, 2ಬಿ, 3ಎ, 3ಬಿ ಗೆ 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಕ್ಕೆ 40 ವರ್ಷ ಗರಿಷ್ಠ ಪ್ರಮಾಣದ ವಯೋಮಿತಿ ಇರುತ್ತದೆ. ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ₹200, ಪ್ರವರ್ಗ-2ಎ, 2ಬಿ ಮತ್ತು 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ₹100 ಶುಲ್ಕವಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.
ಆನ್‍ಲೈನ್ ಅರ್ಜಿ ಸಲ್ಲಿಕೆ, ಸೂಚನೆಗಳು, ವಯೋಮಿತಿ ಸಡಿಲಿಕೆ, ಹುದ್ದೆ ವರ್ಗೀಕರಣ, ಆಯ್ಕೆ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ವೆಬ್‍ಸೈಟ್‍ನ್ನು ಸಂಪರ್ಕಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎ.ಮುಸ್ತಫಾ ಹುಸೇನ್ ತಿಳಿಸಿದ್ದಾರೆ.

https://suddikanaja.com/2021/01/17/jobs-in-kptcl-for-diploma-engineering-graduates/

Leave a Reply

Your email address will not be published. Required fields are marked *

error: Content is protected !!