ದೊಡ್ಡಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅರೆಸ್ಟ್

Ganja arrest

 

 

ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಎನ್.ಟಿ.ರಸ್ತೆಯ ನಮೋ ಶಂಕರ್ ಲೇಔಟಿನ ಖಾಲಿ ಜಾಗದಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ಕೈಗೊಂಡು ಇಬ್ಬರನ್ನು ಬಂಧಿಸಲಾಗಿದೆ.

READ | ಗೋಪಾಳ ಬಳಿ ಮಾರಣಾಂತಿಕ ಹಲ್ಲೆ ಮಾಡಿದವರಿಗೆ 3 ವರ್ಷ ಜೈಲು 

ಆರ್.ಎಂ.ಎಲ್ ನಗರದ ಮಹಮ್ಮದ್ ರಿಜ್ವಾನ್(25), ಅಶೋಕನಗರದ ರೆಹಮಾನ್(19) ಎಂಬುವವರನ್ನು ಬಂಧಿಸಿ, ಅವರಿಂದ ಅಂದಾಜು 92,000 ರೂಪಾಯಿ ಮೌಲ್ಯದ 1 ಕೆಜಿ 800 ಗ್ರಾಂ ತೂಕದ ಒಣ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಖಚಿತವಾಗಿ ಬಂದ ಮಾಹಿತಿಯ ಅನುಗುಣವಾಗಿ ದೊಡ್ಡಪೇಟೆ ಪಿಎಸ್.ಐ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಆರೋಪಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್. ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!