ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ, ಬದಲಿ ಮಾರ್ಗದ ಮಾಹಿತಿ ಇಲ್ಲಿದೆ, ಯಾವ ವಾಹನಗಳ ನಿರ್ಬಂಧ?

Agumbe

 

 

ಸುದ್ದಿ‌ ಕಣಜ.ಕಾಂ | DISTRICT | AGUMBE GHAT
ಶಿವಮೊಗ್ಗ: ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.
ಭೂ ಕುಸಿತದ ಮಣ್ಣು ಮತ್ತು ಮರಮಟ್ಟುಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು.

READ | ಆಗುಂಬೆ ಘಾಟಿಯಲ್ಲಿ ಸಂಚಾರ ಸ್ಥಗಿತ

ಪರ್ಯಾಯ ಮಾರ್ಗ
ತೀರ್ಥಹಳ್ಳಿ- ಕೊಪ್ಪ- ಶೃಂಗೇರಿ- ಕಾರ್ಕಳ- ಮಂಗಳೂರು, ತೀರ್ಥಹಳ್ಳಿ- ಆಗುಂಬೆ- ಶೃಂಗೇರಿ- ಕಾರ್ಕಳ- ಮಂಗಳೂರು, ತೀರ್ಥಹಳ್ಳಿ- ಮಾಸ್ತಿಕಟ್ಟೆ- ಕುಂದಾಪುರ ಮಾರ್ಗವನ್ನು ವಾಹನ ಸಂಚಾರಕ್ಕೆ ಬಳಸುವಂತೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!