ಶಿವಮೊಗ್ಗ ಸೇರಿ ರಾಜ್ಯದಲ್ಲಿ‌ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕ್ಯಾನ್ಸಲ್, ಯಾವೆಲ್ಲ‌ ಜಿಲ್ಲೆಗಳಿಗೆ ಅನ್ವಯ?

Vidhan saudha

 

 

ಸುದ್ದಿ ಕಣಜ.ಕಾಂ | DISTRICT | DC GRAMA VASTAVYA
ಶಿವಮೊಗ್ಗ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನಕ್ಕೆ ಸರ್ಕಾರ ತಾತ್ಕಾಲಿಕ ವಿನಾಯಿತಿ ನೀಡಿದೆ.
ಪ್ರಸ್ತುತ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂತ್ರಸ್ತರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ ಮತ್ತು ಪರಿಹಾರ ವಿತರಿಸುವ ಹಾಗೂ ನಷ್ಟ ಅಂದಾಜು ಮಾಡುವ ಕಾರ್ಯದಲ್ಲಿ ಜಿಲ್ಲಾಡಳಿತವು ಕಾರ್ಯ ಪ್ರವೃತ್ತವಾಗಬೇಕಾಗಿದ್ದು, ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ನಡೆಸಲು ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.

READ | ಇಂದಿನಿಂದ ದುಬಾರಿ ದುನಿಯಾ, ಮೊಸರು, ಮಾಂಸ, ಚೆಕ್ ವಿತರಣೆಗೂ ಬೀಳಲಿದೆ ಟ್ಯಾಕ್ಸ್, ಯಾವುದಕ್ಕೆಲ್ಲ ತೆರಿಗೆ?

ಆದ್ದರಿಂದ ಹೆಚ್ಚು ಮಳೆಯಾಗುತ್ತಿರುವ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಜುಲೈ 16 ರ ಮೂರನೇ ಶನಿವಾರದಂದು ಜರುಗಬೇಕಾಗಿರುವ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನಕ್ಕೆ ಜುಲೈನಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!