ಗೊಬ್ಬರ ಕೃತಕ ಅಭಾವ ಸೃಷ್ಟಿಸಿದರೆ ಕಾದಿದೆ ಆಪತ್ತು

Public Notice

 

 

ಸುದ್ದಿ ಕಣಜ.ಕಾಂ | DISTRICT | AGRICULTURE NEWS
ಶಿವಮೊಗ್ಗ: ತಾಲ್ಲೂಕಿನಲ್ಲಿ ರೈತರು ಮೆಕ್ಕೆಜೋಳಕ್ಕೆ ಮೇಲು ಗೊಬ್ಬರವಾಗಿ ಯೂರಿಯಾ ಗೊಬ್ಬರವನ್ನು ಬಳಕೆ ಮಾಡುತ್ತಿದ್ದು, ಮಾರಾಟಗಾರರು ರೈತರಿಗೆ ಎಂ.ಆರ್.ಪಿ ದರದಲ್ಲಿಯೇ ರಸಗೊಬ್ಬರ(ಯೂರಿಯಾ) ಮಾರಾಟ ಮಾಡಬೇಕು.
ಪರಿಕರ ಮಾರಾಟಗಾರರು ರಸಗೊಬ್ಬರಗಳ ದರಗಳನ್ನು ಮಾರ್ಗಸೂಚಿಯನ್ವಯ ಪ್ರದರ್ಶನ ಮಾಡಿ ನಿಗದಿತ ನಮೂನೆಯಲ್ಲಿ ಬಿಲ್‍ಗಳನ್ನು ನೀಡಿ ಮಾರಾಟ ಮಾಡಲು ಸೂಚಿಸಲಾಗಿದೆ. ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟ ಮಾಡುವುದು ಅಥವಾ ಯೂರಿಯಾ ಗೊಬ್ಬರ ಇಲ್ಲವೆಂದು ಕೃತಕ ಅಭಾವ ಸೃಷ್ಟಿಸುವುದು ಕಂಡುಬಂದಲ್ಲಿ ಅಂತಹ ಕೃಷಿ ಪರಿಕರ ಮಾರಾಟ ಮಳಿಗೆಗಳ ಪರವಾನಿಗೆಯನ್ನು ರದ್ದು ಮಾಡಿ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಶಿವರಾಜ್‍ಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!