ಹುಷಾರ್, ಕಳಪೆ ರಸಗೊಬ್ಬರ ಪೂರೈಸಿದರೆ ಬೀಳುತ್ತೆ‌ ಕ್ರಿಮಿ‌ನಲ್ ಕೇಸ್

DC Office

 

 

ಸುದ್ದಿ ಕಣಜ.ಕಾಂ | DISTRICT | AGRICULTURE
ಶಿವಮೊಗ್ಗ: ಕಳಪೆ‌ ಗುಣಮಟ್ಟದ ರಸಗೊಬ್ಬರವನ್ನು ಪೂರೈಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಆದೇಶಿಸಿದರು.
ಅವರು ಸೋಮವಾರ ಜಿಲ್ಲೆಯಲ್ಲಿ ರಸಗೊಬ್ಬರ ಲಭ್ಯತೆ ಕುರಿತು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದರು.
ಕೃಷಿ ಇಲಾಖೆ ಅಧಿಕಾರಿಗಳು ನಿರಂತರವಾಗಿ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರಸಗೊಬ್ಬರ ಮತ್ತು ಬಿತ್ತನೆ ಬೀಜ ಲಭ್ಯತೆ ಬಗ್ಗೆ ಪರಿಶೀಲಿಸಬೇಕು. ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗದಂತೆ ಎಚ್ಚರಿಕೆ ವಹಿಸಬೇಕು. ಕಲಬೆರೆಕೆ ರಸಗೊಬ್ಬರ ಮಾರಾಟದ ಮೇಲೆ ನಿಗಾ ಇರಿಸಿ ನಿರಂತರ ತಪಾಸಣೆ ಕಾರ್ಯ ಕೈಗೊಳ್ಳಬೇಕು. ರಸಗೊಬ್ಬರದ ಗುಣಮಟ್ಟದ ಬಗ್ಗೆ ದೂರುಗಳು ಬಂದ ತಕ್ಷಣ ಪರಿಶೀಲನೆ ನಡೆಸಿ, ಅಂತಹ ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಹೇಳಿದರು.

READ | ಶಿವಮೊಗ್ಗದಲ್ಲಿ ಮತ್ತೊಂದು ಮರ್ಡರ್’ಗೆ ಸ್ಕೆಚ್

16,220 ಮೆಟ್ರಿಕ್‌ ಟನ್ ರಸಗೊಬ್ಬರ ದಾಸ್ತಾನು
ಜಿಲ್ಲೆಯ ಅವಶ್ಯಕತೆಗನುಗುಣವಾಗಿ ವಿವಿಧ ಶ್ರೇಣಿಯ ರಸಗೊಬ್ಬರಗಳನ್ನು ಹಂತ ಹಂತವಾಗಿ ಪೂರೈಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಒಟ್ಟಾರೆಯಾಗಿ ಸೆಪ್ಟೆಂಬರ್ ಅಂತ್ಯದವರೆಗೆ 1,03,857 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆಯಿದ್ದು, ಇದುವರೆಗೆ 64,130 ಮೆ.ಟನ್ ರಸಗೊಬ್ಬರ ಪೂರೈಕೆಯಾಗಿದೆ. ಇದರಲ್ಲಿ 47,910 ಮೆ.ಟನ್ ರಸಗೊಬ್ಬರ ವಿತರಣೆ ಮಾಡಲಾಗಿದ್ದು, 16,220 ಮೆ.ಟನ್ ರಸಗೊಬ್ಬರ ದಾಸ್ತಾನಿದೆ. ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವಂತೆ ಖಾತ್ರಿಪಡಿಸಬೇಕು ಎಂದು ಹೇಳಿದರು.
ಪ್ರತಿ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುವ ರಸಗೊಬ್ಬರ ದಾಸ್ತಾನು ಬಗ್ಗೆ ವಿವರಗಳನ್ನು ಪ್ರಕಟಿಸಬೇಕು. ಕಳಪೆ ಬಿತ್ತನೆ ಬೀಜ ಪೂರೈಕೆ ಕುರಿತು ದೂರುಗಳು ಬಂದರೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಬೆಳೆ ಹಾನಿ ಸಮೀಕ್ಷೆ ನಡೆಸಿ
ಅತಿವೃಷ್ಟಿಯಿಂದ ಜಿಲ್ಲೆಯ ವಿವಿದೆಡೆ ಉಂಟಾಗಿರುವ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ಸಮಗ್ರ ವರದಿಯನ್ನು ಸಲ್ಲಿಸಬೇಕು. ನೆರೆ ನೀರು ಕಡಿಮೆಯಾದ ತಕ್ಷಣ ಬೆಳೆ ಹಾನಿ ಸಮೀಕ್ಷೆ ಆರಂಭಿಸಬೇಕು. ಬೆಳೆ ಹಾನಿ ಕುರಿತು NDRF ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಬೆಳೆಹಾನಿ ಸಂಭವಿಸಿದ ರೈತರಿಗೆ ಸೂಕ್ತ ಪರಿಹಾರ ಧನವನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

READ | ಗೊಬ್ಬರ ಕೃತಕ‌ ಅಭಾವ ಸೃಷ್ಟಿಸಿದರೆ‌‌ ಕಾದಿದೆ‌ ಆಪತ್ತು

54,042 ಹೆಕ್ಟೇರ್ ಬಿತ್ತನೆ ಗುರಿ
ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 79,602 ಹೆಕ್ಟೇರ್ ಭತ್ತ ಕೃಷಿ ಗುರಿ ಹೊಂದಲಾಗಿದ್ದು, ಇದುವರೆಗೆ 6,776 ಹೆಕ್ಟೇರ್, 53ಸಾವಿರ ಹೆಕ್ಟೇರ್ ಮುಸುಕಿನ ಜೋಳ ಗುರಿ ಹೊಂದಲಾಗಿದ್ದು, 45,795 ಹೆಕ್ಟೇರ್ ಗುರಿ ಸಾಧಿಸಲಾಗಿದೆ. ಒಟ್ಟಾರೆಯಾಗಿ 1,35,184 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದ್ದು, 54,042 ಹೆಕ್ಟೇರ್ ಬಿತ್ತನೆ ಗುರಿಯನ್ನು ಸಾಧಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಪೂರ್ಣಿಮಾ ಅವರು ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

https://suddikanaja.com/2021/05/10/instruction-about-pesticides-rate/

Leave a Reply

Your email address will not be published. Required fields are marked *

error: Content is protected !!