ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಆಲ್ಕೋಳ (Alkola) ವಿದ್ಯುತ್ ವಿತರಣೆ ಕೇಂದ್ರದಿಂದ ಸರಬರಾಜು ಮಾಡಲಾಗುವ ಎಎಫ್ 8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 21ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ನಗರ ಉಪ ವಿಭಾಗ 3ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಕೆ.ಎಚ್.ಬಿ ಹುಡ್ಕೋ, ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಕಟ್ಟೆ ಸುಬ್ಬಣ್ಣ ಕಲ್ಯಾಣ ಮಂದಿರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
READ | ಹಂದಿ ಅಣ್ಣಿ ಕೊಲೆ ಆರೋಪಿಗಳು ಶಿವಮೊಗ್ಗ ಪೊಲೀಸರ ವಶಕ್ಕೆ, ಇಂದೇನೇನು ಪ್ರಕ್ರಿಯೆ ನಡೆಯಲಿವೆ?