ಉಕ್ಕಿನ ನಗರಿ ಭದ್ರಾವತಿಗೆ ಭೇಟಿ ನೀಡಲಿದ್ದಾರೆ ಅಮಿತ್ ಶಾ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೇಂದ್ರ ಗೃಹ ಸಚಿವಾಲಯ ಅಡಿ ಬರುವ ರ‍್ಯಾಪಿಡ್ ಆಕ್ಷನ್ ಫೋರ್ಸ್ ಉಕ್ಕಿನ ನಗರಿ ಭದ್ರಾವತಿಯಲ್ಲಿ ಸ್ಥಾಪನೆಯಾಗಲಿದೆ. ಇದರ ಶಂಕುಸ್ಥಾಪನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಿವಮೊಗ್ಗ ನಗರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ ಸಂಸದರು, ಭದ್ರಾವತಿ ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಇದಕ್ಕಾಗಿ 50 ಎಕರೆ ಭೂಮಿ ಕೂಡ ಮಂಜೂರಾಗಿದೆ. ಇದರ ಶಂಕುಸ್ಥಾಪನೆಗೆ ಅಮಿತ್ ಶಾ ಆಗಮಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಭದ್ರಾವತಿಯಲ್ಲಿ ಸ್ಥಾಪನೆ ಆಗಲಿರುವ ಆರ್.ಎ.ಎಫ್. ಪಡೆ ಕರ್ನಾಟಕ, ಗೋವಾ, ಕೇರಳ ಮತ್ತು ಲಕ್ಷದ್ವೀಪ ಒಳಗೊಂಡಂತೆ ನಾಲ್ಕು ರಾಜ್ಯಗಳ 38 ಜಿಲ್ಲೆಗಳ ಕಾರ್ಯ ವ್ಯಾಪ್ತಿಗೆ ಒಳಪಡಲಿದೆ. 97 ಕಮಾಂಡೆಂಟ್ ‌ಗಳು ಸೇರಿ 2000 ಮಂದಿ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದರು.

error: Content is protected !!