ಸುದ್ದಿ ಕಣಜ.ಕಾಂ | DISTRICT | VIRAL NEWS
ಶಿವಮೊಗ್ಗ: ಸೋಮವಾರ ಬೆಳ್ಳಂಬೆಳಗ್ಗೆ ಕಾಲೇಜು ಕ್ಯಾಂಪಸ್’ವೊಂದರಲ್ಲಿ ಅಮಲುಭರಿತ ವಿದ್ಯಾರ್ಥಿಗಳು ತೂರಾಡಿತ್ತಿರುವ ದೃಶ್ಯ ವೈರಲ್ ಆಗಿದೆ. ಇದರ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
READ | ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅರೆಸ್ಟ್, ವಿಚಾರಣೆ ಬಳಿಕ ಪ್ರಕರಣಕ್ಕೆ ಟ್ವಿಸ್ಟ್
ಪೊಲೀಸರೇನು ಹೇಳ್ತಾರೆ?
ಶಿವಮೊಗ್ಗದ ಕಾಲೇಜಿನ ಕ್ಯಾಂಪಸ್’ವೊಂದರಲ್ಲಿ ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತು ಸೇವಿಸಿ ಮತ್ತಿನಲ್ಲಿ ಇರುವಂತಹ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುತ್ತದೆ. ಈ ವಿಚಾರವಾಗಿ ಪ್ರಾಥಮಿಕ ತನಿಖೆ ನಡೆಸಿದ್ದು, ತನಿಖೆಯಲ್ಲಿ ವಿದ್ಯಾರ್ಥಿಗಳು ಸಾಗರ ರಸ್ತೆಯಲ್ಲಿರುವ ಬಾರ್ ಒಂದರಲ್ಲಿ ಮದ್ಯ ಸೇವನೆ ಮಾಡಿಕೊಂಡು ಬಸ್ ಹತ್ತಲು ಕಾಲೇಜಿನ ಹತ್ತಿರ ಬಂದಾಗ ಕಾಲೇಜಿನ ಗೇಟ್’ನಲ್ಲಿ ತಡೆದು ಅವರ ಪೋಷಕರಿಗೆ ಈ ವಿಚಾರವನ್ನು ತಿಳಿಸಿ, ಕಾಲೇಜು ಆಡಳಿತ ಮಂಡಳಿಯು ಪೋಷಕರೊಂದಿಗೆ ವಿದ್ಯಾರ್ಥಿಗಳಿಗೆ ಈ ವಿಷಯವಾಗಿ ಸಮಾಲೋಚನೆ ನಡೆಸಿರುವುದು ಕಂಡು ಬಂದಿರುತ್ತದೆ ಎಂದು ತಿಳಿಸಿದ್ದಾರೆ.