ಯಡಿಯೂರಪ್ಪ ಹೇಳಿಕೆ ಸಮರ್ಥಿಸಿಕೊಂಡ ಈಶ್ವರಪ್ಪ

KS Eshwarappa

 

 

ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ಇತ್ತೀಚೆಗೆ ಶಿಕಾರಿಪುರದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರು ವಿಜಯೇಂದ್ರ(Vijayendra)ಗೆ ಟಿಕೆಟ್ ನೀಡುವ ಬಗ್ಗೆ ನಿರ್ಧಾರ ಪ್ರಕಟಿಸಿ ನಂತರ ಬೆಂಗಳೂರಿನಲ್ಲಿ ನೀಡಿದ ಹೇಳಿಕೆಯನ್ನು ಶಾಸಕ ಕೆ.ಎಸ್.ಈಶ್ವರಪ್ಪ (KS Eshwarappa) ಅವರು ಸಮರ್ಥಿಸಿಕೊಂಡಿದ್ದಾರೆ.

VIDEO REPORT | ಯಡಿಯೂರಪ್ಪ ಹೇಳಿಕೆಗೆ ಸಮರ್ಥನೆ 

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಅವರು ಯೋಚನೆ ಮಾಡಿಯೇ ನಿರ್ಧಾರ ತೆಗೆದುಕೊಂಡಿರುತ್ತಾರೆ. ಕೇಂದ್ರ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ವಿಜಯೇಂದ್ರ ಬದ್ಧರಾಗಿರುತ್ತಾರೆ ಎಂದು ಈಗಾಗಲೇ ಯಡಿಯೂರಪ್ಪ ಕೂಡ ತಿಳಿಸಿದ್ದಾರೆ. ಟಿಕೆಟ್ ನೀಡುವ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು. ಬಿಜೆಪಿಯಲ್ಲಿ ಯಾವುದೇ ಗೊಂದಲಗಳಿಲ್ಲ’ ಎಂದು ಹೇಳಿದರು.

READ | ಅಮಲಿನಲ್ಲಿ‌ ತೂರಾಡುತ್ತಿರುವ ವಿದ್ಯಾರ್ಥಿಗಳ ವಿಡಿಯೋ ವೈರಲ್, ಪೊಲೀಸರೇನು ಹೇಳ್ತಾರೆ?

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ವಿರುದ್ಧ ವಾಕ್ ಪ್ರಹಾರ
ಒಕ್ಕಲಿಗರಲ್ಲಿ ಕೆಂಪೇಗೌಡರ ಹಾಗೂ ಕುರುಬರಲ್ಲಿ ಸಂಗೊಳ್ಳಿ ರಾಯಣ್ಣರ ರಕ್ತ ಹರಿಯುತ್ತಿದೆ. ಆದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜಾತಿ ಮತ್ತು ಮಹಾಪುರುಷರಿಗೆ ಅವಮಾನ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನುಗುಣವಾಗಿ ಅವರು ನಡೆದುಕೊಳ್ಳಬೇಕು ಎಂದು ಹೇಳಿದರು.
ಕಾಂಗ್ರೆಸ್‍ನಿಂದ ಸಿ ಫಾರ್ಮ್ ತೆಗೆದುಕೊಳ್ಳುವುದಕ್ಕೂ ಹಿಂದೇಟು
ಕಾಂಗ್ರೆಸ್ ಸ್ವಾರ್ಥಿಗಳ ಕೂಟವಾಗಿದೆ. ಹೀಗಾಗಿಯೇ ದೇಶದಲ್ಲಿ ಪಕ್ಷ ನಿರ್ನಾಮವಾಗುತ್ತಿದೆ. ಇಂದಿರಾ ಗಾಂಧಿ ಅವರ ಕಾಲದಲ್ಲಿ ಕನ್ಯಾಕುಮಾರಿಯಿಂದ ಜಮ್ಮುವಿನವರೆಗೆ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಕಾಂಗ್ರೆಸ್’ನಿಂದ ಬಿ ಫಾರ್ಮ್ ಸಿಕ್ಕರೆ ಅವರು ಗೆದೇ ಗೆಲ್ಲುತ್ತಾರೆ ಎಂಬ ವಿಶ್ವಾಸವಿತ್ತು. ಆದರೀಗ, ಸ್ಥಿತಿ ಬದಲಾಗಿದೆ. ಪಕ್ಷದಿಂದ ಸಿ ಫಾರ್ಮ್ ತೆಗೆದುಕೊಳ್ಳುವುದಕ್ಕೂ ಭಯ ಪಡುತಿದ್ದಾರೆ ಎಂದು ಲೇವಡಿ ಮಾಡಿದರು.

https://suddikanaja.com/2021/08/04/karnataka-cabinet-list/

Leave a Reply

Your email address will not be published. Required fields are marked *

error: Content is protected !!