ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಜುಲೈ 28ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
READ | ಶಿವಮೊಗ್ಗದಲ್ಲಿ ಪೊಲೀಸರ ಹೈಅಲರ್ಟ್, ತಲ್ವಾರ್ ಸೇರಿ ಮಾರಕಾಸ್ತ್ರಗಳು ಸೀಜ್
ಈ ದಾಖಲೆಗಳನ್ನು ತನ್ನಿ
ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293 /9380663606 , 9482023412 ಗಳನ್ನು ಸಂಪರ್ಕಿಸುವುದು.