ಸುದ್ದಿ ಕಣಜ.ಕಾಂ | DISTRICT | LINGANAMAKKI DAM
ಶಿವಮೊಗ್ಗ: ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗಮಕ್ಕಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೇ ದಿನೆ ಏರುತ್ತಿದೆ.
ಜಲಾಶಯದ ಗರಿಷ್ಟ ಮಟ್ಟ 1819.00 ಅಡಿಗಳಾಗಿದ್ದು ಆಗಸ್ಟ್ 6ರ ಬೆಳಗ್ಗೆ 8 ಗಂಟೆಗೆ ಜಲಾಶಯದ ನೀರಿನ ಮಟ್ಟ 1801.35 ಅಡಿಗಳಾಗಿರುತ್ತದೆ. ಈ ದಿನದ ಲಿಂಗನಮಕ್ಕಿ ಜಲಾಶಯದ ಒಳಹರಿವು ಸುಮಾರು 30,000 ಕ್ಯೂಸೆಕ್ಸ್ ಗಳಿಗಿಂತಲೂ ಅಧಿಕವಾಗಿದ್ದು ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ.
ಕೆಪಿಸಿ ಸೂಚನೆ
ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು. ಆದ್ದರಿಂದ ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕೆಂದು ಕರ್ನಾಟಕ ವಿದ್ಯುತ್ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
https://suddikanaja.com/2022/07/11/rainfall-in-shivamogga-and-dam-level/