Kole roga | ಕೊಳೆ ರೋಗದಿಂದ ಅಡಿಕೆ ಮರ ರಕ್ಷಣೆ ಕ್ರಮಗಳೇನು?

Public Notice

 

 

ಸುದ್ದಿ‌ ಕಣಜ.ಕಾಂ | DISTRICT | HORTICULTURE NEWS
ಶಿವಮೊಗ್ಗ: ಪ್ರಸ್ತುತ ಹೆಚ್ಚು ಮಳೆ, ಮೋಡಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ ಮತ್ತು ಸೂರ್ಯನ ಬೆಳಕಿನ ಕೊರತೆಯಿಂದ ಕೊಳೆ ರೋಗವು ಉಲ್ಬಣವಾಗುವ ಸಾಧ್ಯತೆ ಹೆಚ್ಚಿದೆ‌. ಹೀಗಾಗಿ, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ನಾಗರಾಜಪ್ಪ ಅಡಿವಪ್ಪರ್ ತಿಳಿಸಿದ್ದಾರೆ.

READ | ಲಿಂಗನಮಕ್ಕಿ ಜಲಾಶಯ ನೀರು ಹೊರಬಿಡುವ ಬಗ್ಗೆ ಮೊದಲ ಎಚ್ಚರಿಕೆ‌

ಮುನ್ನೆಚ್ಚರಿಕೆ ಕ್ರಮಗಳೇನು?

  • ತೋಟಗಳಲ್ಲಿ ಹೆಚ್ಚಾಗಿ ನೀರು ನಿಲ್ಲದಂತೆ ಬಸಿಗಾಲುವೆ ಚೊಕ್ಕ ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡುವುದು.
  • ಗಾಳಿ ಆಡುವಂತೆ ಮಾಡಲು ಅಂತರ ಬೆಳೆಗಳ ಹಾಗೂ ತೋಟದ ಅಂಚಿನ ಮರಗಳ ಹೆಚ್ಚುವರಿ ರೆಂಬೆಗಳನ್ನು ಕತ್ತರಿಸಿ ತೆಗೆಯುವುದು.
  • ಶೇ.1 ರ ಬೋರ್ಡೋ ದ್ರಾವಣ ಅಥವಾ ಶೇ.0.2 ರ ಮೆಟಲಾಕ್ಸಿಲ್ ಎಂ.ಜಡ್ (2 ಗ್ರಾಂ 1 ಲೀ ನೀರಿನಲ್ಲಿ ಕರಗಿಸಿ) ಅಥವಾ ಶೇ. 0.3 ರ ತಾಮ್ರದ ಆಕ್ಸಿಕ್ಲೋರೈಡ್ (3 ಗ್ರಾಂ 1.0 ಲೀ ನೀರಿನಲ್ಲಿ ಕರಗಿಸಿ) ದಿಂದ ಗೊನೆಗಳಿಗೆ ಹಾಗೂ ಎಲೆ ತೊಟ್ಟು, ಹೊಡೆ ಭಾಗ ಮತ್ತು ಸುಳಿಭಾಗಗಳು ಚೆನ್ನಾಗಿ ನೆನೆಯುವಂತೆ ಸೂಕ್ತ ಅಂಟಿನೊಂದಿಗೆ (ರಾಳ) ಸಿಂಪರಣೆ ಮಾಡಿ.

ಈ ಮೇಲಿನ ಕ್ರಮಗಳನ್ನು ಸಾಮೂಹಿಕವಾಗಿ ಏಕಕಾಲದಲ್ಲಿ ಅನುಸರಿಸಿದಲ್ಲಿ ಮರಗಳನ್ನು ಸುಳಿಕೊಳೆ ಅಥವಾ ಶಿರಕೊಳೆಯಿಂದ ಸಾಯುವುದನ್ನು ತಪ್ಪಿಸಬಹುದಾಗಿದೆ ಎಂದು ಅವರು ರೈತರಿಗೆ ಸಲಹೆ ನೀಡಿದ್ದಾರೆ.

https://suddikanaja.com/2021/07/17/affect-of-root-worm-in-arecanut/

Leave a Reply

Your email address will not be published. Required fields are marked *

error: Content is protected !!