Public Notice | ವಿವಿಧ‌ ಹುದ್ದೆಗಳ‌ ಆಯ್ಕೆಗೆ ಅರ್ಜಿ‌ ಆಹ್ವಾನ

IMG 20220517 232257 102

 

 

ಸುದ್ದಿ ಕಣಜ.ಕಾಂ | 21 AUG 2022 | PUBLIC NOTICE
ಶಿವಮೊಗ್ಗ: ಜಿಲ್ಲೆಯಲ್ಲಿ 3 ವರ್ಷಗಳ ಕಾಲಾವಧಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಮತ್ತು ಬಾಲನ್ಯಾಯ ಮಂಡಳಿ ಅಧ್ಯಕ್ಷರ ಹುದ್ದೆಗೆ ಹಾಗೂ ಸದಸ್ಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆಪ್ಟೆಂಬರ್ 1ರವರೆಗೆ ವಿಸ್ತರಿಸಲಾಗಿದೆ.

READ | ಗಣಪತಿ ಪ್ರತಿಷ್ಠಾಪನೆಗೆ ಪೊಲೀಸ್ ಇಲಾಖೆ‌ ಕಂಡಿಷನ್ಸ್

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶನದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ.‌ ಅರ್ಜಿ ನಮೂನೆಗಳು ನಿರ್ದೇಶನಾಲಯದ ವೆಬ್‍ಸೈಟ್ www.icps.karnataka.gov.in ರಲ್ಲಿ ಲಭ್ಯವಿದ್ದು, ಅರ್ಜಿದಾರರು ಸಮಿತಿ ಅಥವಾ ಮಂಡಳಿ ಯಾವುದಾದರೊಂದಕ್ಕೆ ಮಾತ್ರ ಅರ್ಜಿ ಸಲ್ಲಿಸುವುದಾದಲ್ಲಿ ಅರ್ಜಿಯನ್ನು ದ್ವಿಪ್ರತಿಗಳಲ್ಲಿ ಹಾಗೂ ಎರಡಕ್ಕೂ ಅರ್ಜಿ ಸಲ್ಲಿಸಲು ಬಯಸಿದಲ್ಲಿ ಪ್ರತ್ಯೇಕ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ರಿಜಿಸ್ಟರ್ಡ್ ಅಂಚೆ ಮೂಲಕ ಅಥವಾ ಖುದ್ದಾಗಿ ಸೆಪ್ಟೆಂಬರ್ 1 ರೊಳಗಾಗಿ ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮಹಿಳಾ ಮತ್ತು ಮಕ್ಕಳ ನಿರ್ದೇಶನಾಲಯ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ಬೀದಿ, ಬೆಂಗಳೂರು 560001 ಇಲ್ಲಿಗೆ ಸಲ್ಲಿಸುವುದು. 
ಹೆಚ್ಚಿನ  ಮಾಹಿತಿಗಾಗಿ ನಿರ್ದೇಶನಾಲಯದ ದೂ.ಸಂ.: 080-22879382/83 ಅಥವಾ ಆಯಾ ಜಿಲ್ಲೆಗಳ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿ, ಶಿವಮೊಗ್ಗ ದೂ.ಸಂ.: 08182-295709 ನ್ನು ಸಂಪರ್ಕಿಸುವುದು.

https://suddikanaja.com/2022/08/10/case-filed-against-who-11-person-at-shivamogga/

Leave a Reply

Your email address will not be published. Required fields are marked *

error: Content is protected !!