ಸರ್ಕಾರಿ ನೌಕರರೆಂದು ಪರಿಗಣಿಸುವ ಬಗ್ಗೆ ಈಶ್ವರಪ್ಪ ಸ್ಪಷ್ಟನೆ

 

 

ಸುದ್ದಿ‌ಕಣಜ.ಕಾಂ
ಶಿವಮೊಗ್ಗ: ಸಾರಿಗೆ ನೌಕರರ ಹತ್ತು ಬೇಡಿಕೆಗಳಲ್ಲಿ ಎಂಟಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. ಆದರೆ, ಸಾರಿಗೆ ನೌಕರರನ್ನು ಸುತಾರಾಂ ಸರ್ಕಾರಿ ನೌಕರರೆಂದು ಪರಿಗಣಿಸಲು ಸಾಧ್ಯವೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.

ಎಸ್ಮಾ ಜಾರಿ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು?

ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಿಗಮಕ್ಕೆ ಸೇರುವಾಗಲೇ ನೌಕರರು ಆ ಕರಾರು ಒಪ್ಪಿಕೊಂಡಿರುತ್ತಾರೆ. ಹೀಗಾಗಿ, ಈ ಬೇಡಿಕೆ ಈಡೇರಿಸುವುದು ಕಷ್ಟ ಎಂದು ಹೇಳಿದರು.
ಮಾಜಿ ಎಂ.ಎಲ್.ಸಿ ಎಂ.ಬಿ.ಭಾನುಪ್ರಕಾಶ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪಾಲಿಕೆ‌ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

error: Content is protected !!