Political news | ಬಿ.ವೈ.ವಿಜಯೇಂದ್ರ ಶಿಕಾರಿಪುರದಲ್ಲಿ ಸ್ಪರ್ಧಿಸುವ ಬಗ್ಗೆ ಹೇಳಿದ್ದೇನು?

BY Vijayendra

 

 

HIGHLIGHTS

  • ಕಾಂಗ್ರೆಸ್ ಟೀಕೆಗಳಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣ ಪ್ರತಿಕ್ರಿಯೆ
  • ಬರುವ ದಿನಗಳಲ್ಲಿ ಸೊರಬದಲ್ಲಿ ಪಕ್ಷದ ಬೃಹತ್ ಸಮಾವೇಶ ಆಯೋಜನೆ
  • ಶಿಕಾರಿಪುರ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಸೂಕ್ತ ಸಮಯಕ್ಕೆ ಪಕ್ಷ ನಿರ್ಣಯಿಸಲಿದೆ

ಸುದ್ದಿ ಕಣಜ.ಕಾಂ | DISTRICT | 13 SEP 2022
ಶಿವಮೊಗ್ಗ: ವಿಧಾನಸಭೆ ಚುನಾವಣೆಯಲ್ಲಿ ತಾನು ಶಿಕಾರಿಪುರ(Shikaripura)ದಿಂದ ಸ್ಪರ್ಧಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಪಕ್ಷ ನಿರ್ಧರಿಸಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷವು ಸೂಕ್ತ ಸಮಯದಲ್ಲಿ ಸರಿಯಾದ ನಿರ್ಧಾರವನ್ನು ಕೈಗೊಳ್ಳಲಿದೆ ಎಂದರು.

READ | ಸಕ್ರೆಬೈಲಿನ‌ ವಿಡಿಯೋ ವೈರಲ್, ರಸ್ತೆ‌ ಬದಿಯ ವ್ಯಕ್ತಿಯೊಬ್ಬರನ್ನು ಅಟ್ಟಾಡಿಸಿಕೊಂಡು‌ ಹೋದ ಆನೆ

ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಪಕ್ಷದ ಸಂಘಟನೆ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಬರುವ ದಿನಗಳಲ್ಲಿ ಸೊರಬದಲ್ಲಿ ಸಮಾವೇಶ ನಡೆಸುವುದಾಗಿ ಹೇಳಿದರು.
ಅಳಿವಿನ ಸ್ಥಿತಿಯಲ್ಲಿದೆ ಕಾಂಗ್ರೆಸ್: ವಿಜಯೇಂದ್ರ
ಗುಲಾಮ್ ನಬಿ ಆಜಾದ್, ಕಪಿಲ್ ಸಿಬಲ್ ಅಂತಹವರು ಕಾಂಗ್ರೆಸ್ ತೊರೆಯುತ್ತಿದ್ದಾರೆ. ಇದರಿಂದಾಗಿ ಪಕ್ಷವೇ ದೇಶದಲ್ಲಿ ಅಳಿಸಿಹೋಗುವ ಸ್ಥಿತಿಗೆ ತಲುಪಿದೆ. ಆದರೂ, ಬಿಜೆಪಿಯನ್ನು ಟೀಕೆ ಮಾಡುತ್ತಾ ಅಧಿಕಾರ ಹಿಡಿಯುವ ಹಗಲುಗನಸು ಕಾಣಲಾಗುತ್ತಿದೆ. ವಾಸ್ತವದಲ್ಲಿ ಇದು ಫಲಿಸುವುದಿಲ್ಲ ಎಂದು ತಿಳಿಸಿದರು.

https://suddikanaja.com/2022/09/05/aynur-manjunath-talk-about-ks-eshwarappas-ministership/

Leave a Reply

Your email address will not be published. Required fields are marked *

error: Content is protected !!