ಸುದ್ದಿ ಕಣಜ.ಕಾಂ | DISTRICT | 15 SEP 2022
ಶಿವಮೊಗ್ಗ: ತಾಲ್ಲೂಕು ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 16 ರ ಬೆಳಗ್ಗೆ 10 ರಿಂದ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣಿಹೊಸೂರು, ಹೊರಬೈಲು ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತಲ ಗ್ರಾಮಗಳು ಹಾಗೂ ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.