Lokayukta| ಎಸಿಬಿ‌ ರದ್ದು ಬಳಿಕ ಶಿವಮೊಗ್ಗದಲ್ಲಿ ಲೋಕಾಯುಕ್ತದಿಂದ‌ ಮೊದಲ‌ ಸಭೆ, ಎಲ್ಲಿ, ಯಾವಾಗ ನಡೆಯಲಿದೆ?

Lokayukta shivamogga

 

 

HIGHLIGHTS

  • ಲೋಕಾಯುಕ್ತದಿಂದ ಜಿಲ್ಲೆಯಲ್ಲಿ ಸೆಪ್ಟೆಂಬರ್ 23 ರಿಂದ 30ರ ವರೆಗೆ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ
  • ನಿಗದಿಪಡಿಸಿದ ಸಮಯ ಮತ್ತು ಜಾಗದಲ್ಲಿ ಸಾರ್ವಜನಿಕರು ಆಗಮಿಸಿ ತಮ್ಮ ದೂರುಗಳನ್ನು ಸಲ್ಲಿಸುವುದಕ್ಕೆ ಅವಕಾಶ

ಸುದ್ದಿ ಕಣಜ.ಕಾಂ | DISTRICT | 20 SEP 2022
ಶಿವಮೊಗ್ಗ(Shivamogga): ಕರ್ನಾಟಕ ಲೋಕಾಯುಕ್ತ (Lokayukta) ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸೆಪ್ಟೆಂಬರ್ ತಿಂಗಳ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ (public grievance) ಅರ್ಜಿ ಸ್ವೀಕಾರ ಸಭೆ ನಡೆಸುವರು.

READ | 2 ದಿನ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ, ಕಾರಣವೇನು?

ಯಾವ ದಿನಾಂಕದಂದು ಎಲ್ಲಿ ನಡೆಯಲಿದೆ‌ ಸಭೆ?

  • ಸೆಪ್ಟೆಂಬರ್ 23ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ
  • ಸೆ.27 ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊಸನಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಮಧ್ಯಾಹ್ನ 3 ರಿಂದ ಸಂಜೆ 5ರ ವರೆಗೆ ತೀರ್ಥಹಳ್ಳಿ ತಾಲೂಕು ಪಂಚಾಯಿತಿ ಸಭಾಂಗಣ
  • ಸೆ.28ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣ
  • ಸೆ.30ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಸೊರಬ ತಾಲೂಕು ಪಂಚಾಯಿತಿ ಸಭಾಂಗಣ ಹಾಗೂ ಮಧ್ಯಾಹ್ನ 3 ರಿಂದ ಸಂಜೆ 5ರವರೆಗೆ ಶಿಕಾರಿಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಯಲಿದೆ.

ಸಾರ್ವಜನಿಕರು ಸರ್ಕಾರಿ ಕರ್ತವ್ಯ ನಿರ್ವಹಿಸಲು ವಿಳಂಬ ಮತ್ತು ನಿರ್ಲಕ್ಷ್ಯ ತೋರಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಲಿಖಿತ ಅಹವಾಲು ಸಲ್ಲಿಸಬಹುದು ಎಂದು ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

https://suddikanaja.com/2022/09/19/ranga-dasara-has-been-organized-at-shimoga/

Leave a Reply

Your email address will not be published. Required fields are marked *

error: Content is protected !!