ಸುದ್ದಿ ಕಣಜ.ಕಾಂ | TALUK | 23 OCT 2022
ಶಿವಮೊಗ್ಗ: ತಾಲೂಕಿನ ಆಯನೂರು ಬಳಿಯ ಕದಂಬ ಹೋಟೆಲ್ ಹತ್ತಿರ ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಸವಾರ ಮೃತಪಟ್ಟಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
ಬೈಕ್’ನಲ್ಲಿ ಇಬ್ಬರೂ ಶಿವಮೊಗ್ಗದಿಂದ ಆಯನೂರಿಗೆ ರಾತ್ರಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಾಯಗೊಂಡ ವ್ಯಕ್ತಿಯನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆತರಲಾಗಿದೆ. ಮೃತರು ಹಾಗೂ ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://suddikanaja.com/2022/10/23/sambhavami-yuge-yuge-song-release-at-shivamogga-event-of-hindu-mahasabha-ganapathi/