ಸುದ್ದಿ ಕಣಜ.ಕಾಂ ಶಂಕರಘಟ್ಟ(ಶಿವಮೊಗ್ಗ): ಕುವೆಂಪು ವಿಶ್ವವಿದ್ಯಾಲಯದ 40ಕ್ಕೂ ಅಧಿಕ ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಡಿಸೆಂಬರ್ 18, 19 ಮತ್ತು 21ರಂದು ಪ್ರವೇಶಾತಿ ಕೌನ್ಸೆಲಿಂಗ್ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ವಿಶ್ವವಿದ್ಯಾಲಯದ ಮುಖ್ಯ ಆವರಣ, ಕಡೂರು ಪಿ.ಜಿ.ಕೇಂದ್ರ ಮತ್ತು 20ಕ್ಕೂ ಹೆಚ್ಚು ಸ್ನಾತಕೋತ್ತರ ಕಾಲೇಜುಗಳ ಎಲ್ಲ 33 ವಿಭಾಗಗಳ 45 ಕೋರ್ಸ್ಗಳಿಗೆ ಡಿಸೆಂಬರ್ 18 ಮತ್ತು 19ರಂದು ಹಾಗೂ 21ರಂದು ಪ್ರವೇಶಾತಿ ಕೌನ್ಸೆಲಿಂಗ್ ಹಮ್ಮಿಕೊಳ್ಳಲಾಗಿದೆ. ಸಂಪೂರ್ಣ ಪ್ರವೇಶಾತಿಯನ್ನು ಈ ಮೂರು ದಿನಗಳಲ್ಲಿಯೇ ಮಾಡಿ ಮುಗಿಸಲು ವಿವಿ ಯೋಜಿಸಿದೆ.
ಬೆಳಗ್ಗೆ 9.30ಕ್ಕೆ ಆವರಣಕ್ಕೆ ಬರಲು ಸೂಚನೆ: 18 ಮತ್ತು 19ರಂದು ಮೆರಿಟ್ ಸೀಟುಗಳು ಮತ್ತು ವೆಯ್ಟಿಂಗ್ ಪಟ್ಟಿಯ ಅಭ್ಯರ್ಥಿಗಳಿಗೆ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ. ಸೋಮವಾರ 21ರಂದು ಉಳಿಕೆ ಸೀಟುಗಳು, ಪೇಮೆಂಟ್ ಮತ್ತು ಇತರೆ ಕೋಟಾಗಳ ಸೀಟುಗಳಿಗೆ ಪ್ರವೇಶಾತಿ ನಡೆಯಲಿದೆ. ವಿವಿಧ ವಿಭಾಗಗಳಿಗೆ ಅರ್ಜಿ ಹಾಕಿರುವ ವಿದ್ಯಾರ್ಥಿಗಳು 18ರಂದು ಬೆಳಿಗ್ಗೆ 9.30ಕ್ಕೆ ಅಗತ್ಯ ದಾಖಲೆಗಳೊಂದಿಗೆ ವಿವಿಯ ಜ್ಞಾನಸಹ್ಯಾದ್ರಿ ಆವರಣಕ್ಕೆ ಆಗಮಿಸಬೇಕು.
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ (Ayanur manjunath) ಮತ್ತು ಶಾಸಕ ಕೆ.ಎಸ್.ಈಶ್ವರಪ್ಪ (KS Eshwarappa) ಅವರ ನಡುವಿನ ಶೀತಲಸಮರ (cold war) ಮುಂದಿವರಿದಿದೆ. ಮಾಧ್ಯಮಗೋಷ್ಠಿಯಲ್ಲಿ ಆಯನೂರು […]
ಸುದ್ದಿ ಕಣಜ.ಕಾಂ | DISTRICT | JOB JUNCTION ಶಿವಮೊಗ್ಗ: ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಮೇ 12 […]
ಸುದ್ದಿ ಕಣಜ.ಕಾಂ | SHIVAMOGGA | POLITICS ಶಿವಮೊಗ್ಗ: ಅನುಭವಿ ರಾಜಕಾರಣಿ, ಪಕ್ಷದ ಹಿರಿಯ ನಾಯಕರಾದ ಕೆ.ಎಸ್.ಈಶ್ವರಪ್ಪ ಹಾಗೂ ಆರಗ ಜ್ಞಾನೇಂದ್ರ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ಲಭಿಸಿದೆ. | ವಯಸ್ಸು ಹಾಗೂ […]