ADGP Alok kumar | ರೇಣುಕಾಚಾರ್ಯ ಸಹೋದರನ ಪುತ್ರನ ಸಾವು, ಇನ್ನೆರಡು ದಿನಗಳಲ್ಲಿ ರಿಪೋರ್ಟ್

police

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ 
(Shivamogga): ಶಾಸಕ ಎಂ.ಪಿ.ರೇಣುಕಾಚಾರ್ಯ (Renukacharya) ಅವರ ಸಹೋದರನ ಪುತ್ರ ಚಂದ್ರಶೇಖರ್ (26) ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇನ್ನೆರಡು ದಿನಗಳಲ್ಲಿ ವರದಿಗಳು ಹೊರಬರಲಿದ್ದು, ನಂತರ‌ಸಾವಿಗೆ ಕಾರಣ ತಿಳಿದುಬರಲಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.

READ | ಶಿವಮೊಗ್ಗದಲ್ಲಿ ಆಪರೇಷನ್ ಬುಲ್ಡೋಜರ್, ಎಲ್ಲೆಲ್ಲಿ ನಡೆಯಲಿದೆ ತೆರವು ಕಾರ್ಯಾಚರಣೆ?

ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಂಓ, ಎಫ್.ಎಸ್.ಎಲ್ ಸೇರಿದಂತೆ ಮೂರು ವರದಿಗಳು ಬರುವುದು ಬಾಕಿ ಇದೆ. ಚಂದ್ರಶೇಖರ್ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾದ ಬಳಿಕ ಅ.31ರಿಂದ ಇಲ್ಲಿಯವರೆಗೆ ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದರು.
ಟೀಕೆಗಳ‌ ಆಧಾರದ ಮೇಲೆ ತನಿಖೆ‌ ನಡೆಯಲ್ಲ
ರೇಣುಕಾಚಾರ್ಯ ಅವರು ಸಾವಿಗೆ ಕೋಮುವಾದ ಕಾರಣ ಎಂದು ಆರೋಪಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಲೋಕ್ ಕುಮಾರ್, ಟೀಕೆಗಳ ಆಧಾರದ ಮೇಲೆ ತನಿಖೆ ನಡೆಯಲ್ಲ. ಸಾಕ್ಷಿ ಆಧಾರದ ಮೇಲೆ ತನಿಖೆ ನಡೆಸಬೇಕಾಗುತ್ತದೆ. ಚಂದ್ರಶೇಖರ್ ಅವರು ನ್ಯಾಮತಿ, ಶಿವಮೊಗ್ಗದ ಉಷಾ ನರ್ಸಿಂಗ್ ಹೋಮ್, ಚಿಕ್ಕಮಗಳೂರು ಸೇರಿದಂತೆ ಸಂಚರಿಸಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ. ಅದಕ್ಕೆ ಪೂರಕವಾದ ಸಿಸಿಟಿವಿ ದೃಶ್ಯಗಳು ಸಹ ಸಿಕ್ಕಿವೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ಸೇರಿದಂತೆ ಇತರರು‌ ಉಪಸ್ಥಿತರಿದ್ದರು.

error: Content is protected !!