21ರಂದು ನಡೆಯಲಿದೆ ಮಹತ್ವದ ಸಭೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೃಷಿ ಕುರಿತು ರೈತರಿಗೆ ಮಾರಕವಾಗಬಲ್ಲ ಕಾಯ್ದೆಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಡಿಸೆಂಬರ್ 21ರಂದು ಬೆಳಗ್ಗೆ 11ಕ್ಕೆ ಸಭೆ ಕರೆಯಲಾಗಿದೆ.

  1. ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದನ್ನು ಕೈಬಿಡಬೇಕು
  2. ಶೀಘ್ರ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಬೇಕು. ಅದಕ್ಕಾಗಿ ಅಧಿಕ ಅನುದಾನ ಮೀಸಲಿಡಬೇಕು
  3. ರಾಜ್ಯದಲ್ಲಿ ಬೆಳಗ್ಗೆ ಕನಿಷ್ಠ 12 ಗಂಟೆ ತ್ರಿ ಫೇಸ್ ಕರೆಂಟ್ ಪೂರೈಸಬೇಕು.
  4. ಕಬ್ಬಿನ ಬೆಲೆ ನಿಗದಿ, ಬಾಕಿ ವಸೂಲಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು

ನಗರದ ಪಾರ್ಕ್ ಬಡಾವಣೆಯಲ್ಲಿರುವ ರೈತ ಸಂಘದ ಕಚೇರಿಯಲ್ಲಿ ರೈತ ಸಂಘದ ಸಂಸ್ಥಾಪಕ ಎನ್.ಡಿ.ಸುಂದರೇಶ್ ನೆನಪಿನ ಸಭೆ ಮತ್ತು ರಕ್ತದಾನ ಶಿಬಿರ ಆಯೋಜಿಸಿದ್ದು, ಈ ಸಂದರ್ಭದಲ್ಲಿ ಹೋರಾಟದ ಕುರಿತು ಚರ್ಚಿಸಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.
ರಕ್ತದಾನ ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವವರು ಮೊಬೈಲ್ ಸಂಖ್ಯೆ 9449968599, 9945525480, 8310601098 ಸಂಪರ್ಕಿಸುವಂತೆ ಮನವಿ ಮಾಡಿದರು.
ಮಾಧ್ಯಮಗೋಷ್ಠಿಯಲ್ಲಿ ಎಸ್.ಶಿವಮೂರ್ತಿ, ಈರಣ್ಣ, ಕೆ.ರಾಘವೇಂದ್ರ, ಪಿ.ಡಿ.ಮಂಜಪ್ಪ, ಎಂ.ಡಿ.ನಾಗರಾಜ್, ಹಿಟ್ಟೂರು ರಾಜು, ಡಿ.ಎಚ್.ರಾಮಚಂದ್ರ ಉಪಸ್ಥಿತರಿದ್ದರು.

error: Content is protected !!