NIA ಶಿವಮೊಗ್ಗಕ್ಕೆ ಎನ್‍ಐಎ ತಂಡ ಭೇಟಿ, ಏನೆಲ್ಲ ಪರಿಶೀಲನೆ?

NIA

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಷ್ಟ್ರೀಯ ತನಿಖಾ ಸಂಸ್ಥೆ(National Investigation Agency-ಎನ್.ಐ.ಎ)ಯ ತಂಡವು ಶನಿವಾರ ಬೆಳಗ್ಗೆ ಶಿವಮೊಗ್ಗಕ್ಕೆ ಭೇಟಿ ನೀಡಿದೆ. ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ತೀರ್ಥಹಳ್ಳಿ(Thirthahalli)ಯವನಾಗಿದ್ದು, ಶಾರೀಕ್ (Sharik) ಹಾಗೂ ಆತನ ಸಹಚರರ ಬಗ್ಗೆ ಮಾಹಿತಿ ಕಲೆ ಹಾಕುವುದಕ್ಕಾಗಿ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆಗೆ ದಿಢೀರ್ ಭೇಟಿ ನೀಡಿದ್ದಾರೆ.

READ | ಶಿವಮೊಗ್ಗದಲ್ಲಿ ಬಂಧಿತ ಶಂಕಿತ ಉಗ್ರರು ಬಾಂಬ್ ತಯಾರಿಸುವುದನ್ನು ಕಲಿತಿದ್ದೆಲ್ಲಿ? ವಿಚಾರಣೆ ವೇಳೆ ಗೊತ್ತಾಯ್ತು ರೋಚಕ ವಿಚಾರ

ಭೇಟಿಯ ಹಿಂದಿನ ಕಾರಣವೇನು?
ಈ ಹಿಂದೆ ಮೊಹಮ್ಮದ್ ಶಾರೀಕ್ ಸಹಚರರಾದ ಮಾಜ್ ಮುನೀರ್ ಅಹಮ್ಮದ್ ಮತ್ತು ಸೈಯದ್ ಯಾಸೀನ್ ಎಂಬುವವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ತುಂಗಾನದಿಯ ತೀರದಲ್ಲಿ ಪ್ರಾಯೋಗಿಕ ಸ್ಫೋಟ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಆ ಬಗ್ಗೆ ಪರಿಶೀಲನೆ ನಡೆಸಲಾಗಿತ್ತು. ಪ್ರಸ್ತುತ ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟಕ್ಕೂ ಶಿವಮೊಗ್ಗದ ತುಂಗಾ ನದಿ ತೀರದಲ್ಲಿ ನಡೆದ ಸ್ಫೋಟದ ಸಾಮ್ಯತೆಯ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿರುವುದಾಗಿ ಮಾಹಿತಿ ಲಭ್ಯವಾಗಿದೆ. ಅಧಿಕಾರಿಗಳಿಂದ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ತಿಳಿದುಬಂದಿದೆ.

https://suddikanaja.com/2022/09/21/police-invistigation-in-shimoga/

error: Content is protected !!