Job Fair | ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಯೋಗ ಮೇಳ, 7ನೇಯಿಂದ ಪಿಜಿವರೆಗಿನ ಅಭ್ಯರ್ಥಿಗಳು ಭಾಗವಹಿಸಬಹುದು, ಎಷ್ಟು ಕಂಪೆನಿಗಳು ಭಾಗಿ?

Job Fair

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಸಹ್ಯಾದ್ರಿ ಕಲಾ ಕಾಲೇಜಿನ ಸಹಭಾಗಿತ್ವದಲ್ಲಿ ಸರ್ವರಿಗೂ ಉದ್ಯೋಗ ಎಂಬ ಶೀರ್ಷಿಕೆ ಅಡಿಯಲ್ಲಿ ಡಿ.13ರ ಬೆಳಗ್ಗೆ 9.30ರಿಂದ ಸಂಜೆ 4ರವರೆಗೆ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

JOBS FB Linkಎಷ್ಟು ಕಂಪೆನಿಗಳು ಭಾಗಿ, ಯಾರೆಲ್ಲ ಪಾಲ್ಗೊಳ್ಳಬಹುದು?
ಈ ಉದ್ಯೋಗ ಮೇಳದಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸುತ್ತಿವೆ. ಏಳನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ, ಯಾವುದೇ ಸ್ನಾತಕೋತ್ತರ ಪದವಿ ಮುಗಿಸಿದ ಶಿವಮೊಗ್ಗ, ಬೆಂಗಳೂರು ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಕೆಲಸ ಮಾಡಲು ಆಸಕ್ತಿಯುಳ್ಳ ಉದ್ಯೋಗಾಕಾಂಕ್ಷಿಗಳು http://skillconnect.kaushalkar.com/candidatereg ಈ ಲಿಂಕ್ ಮೂಲಕ ಆನ್’ಲೈನ್’ನಲ್ಲಿ ನೋಂದಣಿ ಮಾಡಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

READ | ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಅಭ್ಯರ್ಥಿಗಳಿಗೆ ಸೂಚನೆ
ಉದ್ಯೋಗಾಕಾಂಕ್ಷಿಗಳು ಬರುವಾಗ ಕನಿಷ್ಠ 10 ಸ್ವವಿವರ (Resume) ಪ್ರತಿಗಳನ್ನು ಹಾಗೂ ಇತ್ತೀಚಿನ ಭಾವಚಿತ್ರಗಳನ್ನು ತರುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182 -255294, ಮೊಬೈಲ್ ಸಂಖ್ಯೆ 8197176710, 9019485688 ಅನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

https://suddikanaja.com/2022/12/07/jobs-in-shimoga-smart-city/

error: Content is protected !!