Job Fair | ಶಿವಮೊಗ್ಗದಲ್ಲಿ ನಡೆಯಲಿದೆ ಉದ್ಯೋಗ ಮೇಳ, ಯಾರೆಲ್ಲ‌ ಪಾಲ್ಗೊಳ್ಳಬಹುದು?

Job Fair

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಕರ್ನಾಟಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಡಿಸೆಂಬರ್ 28 ರಂದು ಬೆಳಗ್ಗೆ 10ಕ್ಕೆ
ಗುತ್ಯಪ್ಪ ಕಾಲೋನಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿದೆ.
ಯಾರೆಲ್ಲ ಪಾಲ್ಗೊಳ್ಳಬಹುದು?
ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್ಎಸ್ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿ ತೆಗೆದುಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದು. ಪ್ರವೇಶ ಉಚಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ 08182-255293/ 9380663606/ 9482023412/ 9535312531 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

https://suddikanaja.com/2022/12/25/covid-conditions-in-shimoga/

error: Content is protected !!