Vomiting, Diarrhea | 30ಕ್ಕೂ ಹೆಚ್ಚು ಜನರಲ್ಲಿ ದಿಢೀರ್ ವಾಂತಿ ಭೇದಿ, ಆತಂಕದಲ್ಲಿ ಜನ

vanti bhedi

 

 

ಸುದ್ದಿ ಕಣಜ.ಕಾಂ ಸಾಗರ
SAGAR: ದಿಢೀರ್ ಆಗಿ ವಾಂತಿ (Vomiting) ಭೇದಿ (Diarrhea) ಕಾಣಿಸಿಕೊಂಡಿದ್ದು, ಸುಮಾರು 30ಕ್ಕೂ ಹೆಚ್ಚು ಜನ ಸಾಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಲೂಕಿನ ಆನಂದಪುರ ಸುತ್ತಮುತ್ತ ಗ್ರಾಮಗಳಲ್ಲಿ ಮಹಿಳೆಯರು, ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಜನರು ಭೀತಿಯಲ್ಲಿದ್ದಾರೆ.

READ | ಶಿವಮೊಗ್ಗದಲ್ಲಿ ಫೈಯರ್ ಬ್ರ್ಯಾಂಡ್ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಗುಡುಗು

ಸೋಮವಾರ ಬೆಳಗ್ಗೆಯಿಂದ ಹಲವರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದು ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಖಚಿತ ಕಾರಣ ತಿಳಿದುಬಂದಿಲ್ಲ
ದಿಢೀರ್ ಆಗಿ ವಾಂತಿ ಭೇದಿ ಕಾಣಿಸಿಕೊಂಡಿದ್ದಕ್ಕೆ ಖಚಿತ ಕಾರಣ ತಿಳಿದುಬಂದಿಲ್ಲ. ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ. ಕುದಿಸಿ ಆರಿಸಿದ ನೀರು ಕುಡಿಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ವಾಂತಿ ಭೇದಿಯಿಂದ ಬಂದವರಿಗೆ ಚಿಕಿತ್ಸೆ ನೀಡಲಾಗಿದೆ. ಭಾನುವಾರ ರಾತ್ರಿ ಕಾರ್ಯಕ್ರಮವೊಂದರಲ್ಲಿ ಆಹಾರ ಸೇವನೆ ಮಾಡಿದ್ದರು ಎಂದು ತಿಳಿದುಬಂದಿದೆ.

https://suddikanaja.com/2022/12/26/job-fair-in-in-shivamogga/

error: Content is protected !!