ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ(ಸಿಮ್ಸ್)ಯಲ್ಲಿ ಎಂಬಿಬಿಎಸ್ ಓದುತ್ತಿದ್ದ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರಾವತಿಯ ಮಾವಿನಕೆರೆ ನಿವಾಸಿ ಲಲಿತಾ (22) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ಶಿವಮೊಗ್ಗಕ್ಕೂ ರೂಪಾಂತರದ ಕೊರೊನಾ ಕಾಟ, ಲಂಡನ್ ನಿಂದ ಎಷ್ಟು ಜನ ಬಂದಿದ್ದಾರೆ ಗೊತ್ತಾ?
ಈ ಹಿಂದೆಯೂ ಆತ್ಮಹತ್ಯೆಗೆ ಯತ್ನ: ಇವರು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು. ಕಳೆದ ಒಂದು ವರ್ಷದಿಂದ ಒಬ್ಬಂಟಿಯಾಗಿಯೇ ಇರುತ್ತಿದ್ದರು ಎಂದು ತಿಳಿದುಬಂದಿದೆ.
INFOGRAPHY | ಓಟಿಂಗ್ನಲ್ಲಿ ಬೆಳಗ್ಗೆಯಿಂದ ಮುಂದಿದ್ದ ತೀರ್ಥಹಳ್ಳಿ ಸಂಜೆ ಹೊತ್ತಿಗೆ ಹಿಂದೆ
ರೂಮೇಟ್ ಇರಲಿಲ್ಲ: ಹಾಸ್ಟೆಲ್ ಕೊಠಡಿಯಲ್ಲಿ ಇನ್ನೊಬ್ಬ ವಿದ್ಯಾರ್ಥಿನಿ ಕೂಡ ಇವರೊಂದಿಗೆ ಇರುತ್ತಾರೆ. ಆದರೆ, ಆತ್ಮಹತ್ಯೆ ದಿನ ಅವರು ಲಲಿತಾ ಜತೆ ಇರಲಿಲ್ಲ ಎಂದು ತಿಳಿದುಬಂದಿದೆ.
ಮಂಗಳವಾರ ರಾತ್ರಿ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಗ್ಗೆ ರೂಮೇಟ್ ಬಂದು ಬಾಗಿಲು ತಟ್ಟಿದಾಗ ಲಲಿತಾ ಬಾಗಿಲು ತೆರೆದಿಲ್ಲ. ಅದಕ್ಕೆ ವಾರ್ಡನ್ಗೆ ಮಾಹಿತಿ ನೀಡಿದ್ದು, ಭದ್ರತಾ ಸಿಬ್ಬಂದಿ ಸಹಾಯದಿಂದ ಬಾಗಿಲು ಮುರಿದು ನೋಡಿದಾಗ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.